ವರ್ಗಾವಣೆ ನಿರೀಕ್ಷೆಯಲ್ಲಿದ್ದ ಸರ್ಕಾರಿ ದ್ವಿತೀಯ ಪಿಯುಸಿ ಉಪನ್ಯಾಸಕರಿಗೆ ಮಹತ್ವದ ಮಾಹಿತಿಯೊಂದು ಇಲ್ಲಿದೆ. ಜುಲೈ 7ರ ಇಂದಿನಿಂದ ಕೌನ್ಸೆಲಿಂಗ್ ಆರಂಭವಾಗಲಿದ್ದು, ಜೂಮ್ ತಂತ್ರಾಂಶದ ಮೂಲಕ ಈ ಪ್ರಕ್ರಿಯೆ ನಡೆಯಲಿದೆ.
ಕೌನ್ಸೆಲಿಂಗ್ ಸಂದರ್ಭದಲ್ಲಿ 2018ರಲ್ಲಿ ಕಡ್ಡಾಯ ವರ್ಗಾವಣೆಯಾಗಿದ್ದ ಉಪನ್ಯಾಸಕರಿಗೆ ಮೊದಲ ಆದ್ಯತೆ ನೀಡಲಾಗುತ್ತಿದ್ದು, ಇವರುಗಳ ವರ್ಗಾವಣೆ ಪೂರ್ಣಗೊಂಡ ಬಳಿಕ ಉಳಿದವರ ವರ್ಗಾವಣೆ ಪ್ರಕ್ರಿಯೆ ನಡೆಯಲಿದೆ.
ಇಂದು ಬೆಳಗ್ಗೆ 9 ಗಂಟೆಯಿಂದ ಇಲಾಖೆಯ ಎಲ್ಲಾ ಉಪನಿರ್ದೇಶಕರ ಕಚೇರಿಗಳಲ್ಲಿ ವರ್ಗಾವಣೆ ಕೌನ್ಸಿಲಿಂಗ್ ಪ್ರಕ್ರಿಯೆ ಆರಂಭವಾಗಲಿದ್ದು, ಉಪನ್ಯಾಸಕರು ಸಮಯಕ್ಕೆ ಸರಿಯಾಗಿ ಹಾಜರಿರಬೇಕು ಎಂದು ತಿಳಿಸಲಾಗಿದೆ.