ವರ್ಗಾವಣೆ ನಿರೀಕ್ಷೆಯಲ್ಲಿದ್ದ ಶಿಕ್ಷಕರಿಗೆ ಮಹತ್ವದ ಮಾಹಿತಿಯೊಂದು ಇಲ್ಲಿದೆ. ಕೋರಿಕೆ ವರ್ಗಾವಣೆ ಸಲ್ಲಿಸಲು ಸಮಯಾವಕಾಶ ನೀಡಲಾಗಿದೆ.
ಪ್ರಾಥಮಿಕ ಮತ್ತು ಪ್ರೌಢಶಾಲಾ ಹೆಚ್ಚುವರಿ ಶಿಕ್ಷಕರ ವರ್ಗಾವಣೆ ಕೌನ್ಸೆಲಿಂಗ್ ನಲ್ಲಿ ಸ್ಥಳ ನಿಯುಕ್ತಿಗೊಂಡ ಶಿಕ್ಷಕರು ಮಾತ್ರ ಹೊಸದಾಗಿ ಕೋರಿಕೆ ವರ್ಗಾವಣೆ ಅರ್ಜಿ ಸಲ್ಲಿಸಬಹುದಾಗಿದೆ.
ಇದಕ್ಕಾಗಿ ಜೂನ್ 26 ರವರೆಗೆ ಅವಕಾಶ ಕಲ್ಪಿಸಿಕೊಡಲಾಗಿದ್ದು, ಕೋರಿಕೆ ವರ್ಗಾವಣೆ ಬಯಸುವ ಶಿಕ್ಷಕರು ಅರ್ಜಿ ಸಲ್ಲಿಸಬಹುದಾಗಿದೆ.