ಪಾಲಿಕೆ ಹೊರತುಪಡಿಸಿ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ವ್ಯಾಪಾರ ವಹಿವಾಟು ನಡೆಸುತ್ತಿರುವ ವರ್ತಕರಿಗೆ ರಾಜ್ಯ ಸರ್ಕಾರ ಗುಡ್ ನ್ಯೂಸ್ ನೀಡಿದೆ. ಟ್ರೇಡ್ ಲೈಸೆನ್ಸ್ ನವೀಕರಣ ಅವಧಿಯನ್ನು ಈಗ ವಿಸ್ತರಿಸಲಾಗಿದೆ.
ಈ ಮೊದಲು ಪ್ರತಿವರ್ಷವೂ ಟ್ರೇಡ್ ಲೈಸೆನ್ಸ್ ನವೀಕರಣ ಮಾಡಬೇಕಾಗಿತ್ತು. ಇದೀಗ ಐದು ವರ್ಷಕ್ಕೊಮ್ಮೆ ಪರವಾನಗಿ ನವೀಕರಿಸಿಕೊಳ್ಳಲು ಆದೇಶ ಹೊರಡಿಸಲಾಗಿದೆ. ವಿಧಾನ ಪರಿಷತ್ ನಲ್ಲಿ ಸದಸ್ಯ ಡಿ.ಎಸ್. ಅರುಣ್ ಈ ಕುರಿತಂತೆ ಸರ್ಕಾರದ ಗಮನ ಸೆಳೆದಿದ್ದರು.
ಟ್ರೇಡ್ ಲೈಸೆನ್ಸ್ ನಿಂದ ಅನುಕೂಲಕ್ಕಿಂತ ಅನಾನುಕೂಲವೇ ಜಾಸ್ತಿಯಾಗಿದ್ದು, ಇದನ್ನು ಸರಳೀಕರಣಗೊಳಿಸಬೇಕು ಇಲ್ಲವೇ ರದ್ದುಗೊಳಿಸಬೇಕು ಎಂದು ಅರುಣ್ ಒತ್ತಾಯಿಸಿದ್ದರು. ಇದಕ್ಕೆ ಸ್ಪಂದಿಸಿರುವ ಸರ್ಕಾರ ಈಗ ಐದು ವರ್ಷಕ್ಕೊಮ್ಮೆ ಲೈಸೆನ್ಸ್ ನವೀಕರಿಸಲು ಅವಕಾಶ ಕಲ್ಪಿಸಿದೆ.