alex Certify ವರ್ತಕರಿಗೆ ಗುಡ್ ನ್ಯೂಸ್; ಟ್ರೇಡ್ ಲೈಸೆನ್ಸ್ ನವೀಕರಣ ಅವಧಿ ವಿಸ್ತರಣೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ವರ್ತಕರಿಗೆ ಗುಡ್ ನ್ಯೂಸ್; ಟ್ರೇಡ್ ಲೈಸೆನ್ಸ್ ನವೀಕರಣ ಅವಧಿ ವಿಸ್ತರಣೆ

ಪಾಲಿಕೆ ಹೊರತುಪಡಿಸಿ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ವ್ಯಾಪಾರ ವಹಿವಾಟು ನಡೆಸುತ್ತಿರುವ ವರ್ತಕರಿಗೆ ರಾಜ್ಯ ಸರ್ಕಾರ ಗುಡ್ ನ್ಯೂಸ್ ನೀಡಿದೆ. ಟ್ರೇಡ್ ಲೈಸೆನ್ಸ್ ನವೀಕರಣ ಅವಧಿಯನ್ನು ಈಗ ವಿಸ್ತರಿಸಲಾಗಿದೆ.

ಈ ಮೊದಲು ಪ್ರತಿವರ್ಷವೂ ಟ್ರೇಡ್ ಲೈಸೆನ್ಸ್ ನವೀಕರಣ ಮಾಡಬೇಕಾಗಿತ್ತು. ಇದೀಗ ಐದು ವರ್ಷಕ್ಕೊಮ್ಮೆ ಪರವಾನಗಿ ನವೀಕರಿಸಿಕೊಳ್ಳಲು ಆದೇಶ ಹೊರಡಿಸಲಾಗಿದೆ. ವಿಧಾನ ಪರಿಷತ್ ನಲ್ಲಿ ಸದಸ್ಯ ಡಿ.ಎಸ್. ಅರುಣ್ ಈ ಕುರಿತಂತೆ ಸರ್ಕಾರದ ಗಮನ ಸೆಳೆದಿದ್ದರು.

ಟ್ರೇಡ್ ಲೈಸೆನ್ಸ್ ನಿಂದ ಅನುಕೂಲಕ್ಕಿಂತ ಅನಾನುಕೂಲವೇ ಜಾಸ್ತಿಯಾಗಿದ್ದು, ಇದನ್ನು ಸರಳೀಕರಣಗೊಳಿಸಬೇಕು ಇಲ್ಲವೇ ರದ್ದುಗೊಳಿಸಬೇಕು ಎಂದು ಅರುಣ್ ಒತ್ತಾಯಿಸಿದ್ದರು. ಇದಕ್ಕೆ ಸ್ಪಂದಿಸಿರುವ ಸರ್ಕಾರ ಈಗ ಐದು ವರ್ಷಕ್ಕೊಮ್ಮೆ ಲೈಸೆನ್ಸ್ ನವೀಕರಿಸಲು ಅವಕಾಶ ಕಲ್ಪಿಸಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...