
ಇದೀಗ ಈ ಜೋಡಿ ನಿಶ್ಚಿತಾರ್ಥ ಮಾಡಿಕೊಂಡಿದೆ ಎನ್ನಲಾಗಿದ್ದು, ಬೆಂಗಳೂರಿನ ಪ್ರತಿಷ್ಠಿತ ಬಡಾವಣೆ ಡಾಲರ್ಸ್ ಕಾಲೋನಿಯಲ್ಲಿರುವ ಹರಿಪ್ರಿಯಾ ನಿವಾಸದಲ್ಲಿ ಸಂಬಂಧಿಕರು ಹಾಗೂ ಆತ್ಮೀಯರ ಸಮ್ಮುಖದಲ್ಲಿ ಈ ಕಾರ್ಯಕ್ರಮ ನೆರವೇರಿದೆ ಎಂದು ಹೇಳಲಾಗಿದೆ.
ಈ ವಿಚಾರವನ್ನು ನಟಿ ಹರಿಪ್ರಿಯ ವಿಶಿಷ್ಟ ರೀತಿಯಲ್ಲಿ ಬಹಿರಂಗಪಡಿಸಿದ್ದು ‘ಚಿನ್ನ ನಿನ್ನ ತೋಳಿನಲ್ಲಿ ಕಂದ ನಾನು’ ಎಂಬ ಶೀರ್ಷಿಕೆಯೊಂದಿಗೆ ಸಿಂಹದ ಮಡಿಲಲ್ಲಿ ಮಲಗಿರುವ ಪುಟ್ಟ ಮಗುವೊಂದರ ಚಿತ್ರವನ್ನು ಹಾಕಿದ್ದಾರೆ. ಮೂಲಗಳ ಪ್ರಕಾರ ಇವರುಗಳು ಮುಂದಿನ ವರ್ಷದ ಆರಂಭದಲ್ಲಿ ವೈವಾಹಿಕ ಬದುಕಿಗೆ ಕಾಲಿಡಲಿದ್ದಾರೆ ಎಂದು ತಿಳಿದುಬಂದಿದೆ.