ವಸತಿರಹಿತ ಅಲೆಮಾರಿಗಳಿಗೆ ರಾಜ್ಯ ಸರ್ಕಾರ ಗುಡ್ ನ್ಯೂಸ್ ನೀಡಿದೆ. ಇವರು ಸ್ವಂತ ಸೂರು ಹೊಂದುವ ಸಲುವಾಗಿ ನಾಲ್ಕು ಲಕ್ಷ ರೂಪಾಯಿ ವೆಚ್ಚದಲ್ಲಿ ಮನೆ ನಿರ್ಮಿಸಿ ಕೊಡುವ ಚಿಂತನೆ ನಡೆಸಲಾಗಿದೆ.
ಹಾವೇರಿಯಲ್ಲಿ ಮಾತನಾಡಿರುವ ವಸತಿ ಸಚಿವ ವಿ. ಸೋಮಣ್ಣ ಈ ವಿಷಯ ತಿಳಿಸಿದ್ದು, ಅಲೆಮಾರಿ, ಅರೆ ಅಲೆಮಾರಿ, ಬುಡಬುಡಿಕೆ, ಸುಡುಗಾಡು ಸಿದ್ಧ, ಶಿಳ್ಳೆಕ್ಯಾತ ಮತ್ತಿತರ ಜನಾಂಗದವರಿಗೆ ಇದರಿಂದ ಅನುಕೂಲವಾಗಲಿದೆ ಎಂದು ಹೇಳಿದರು.
ತಮ್ಮ ಇಲಾಖೆಯಿಂದ 2 ಲಕ್ಷ ರೂಪಾಯಿ ಹಾಗೂ ಮುಖ್ಯಮಂತ್ರಿಗಳ ನಿಧಿಯಿಂದ 2 ಲಕ್ಷ ರೂಪಾಯಿ ಅನುದಾನ ಸೇರಿಸಿ ಒಟ್ಟು 4 ಲಕ್ಷ ರೂಪಾಯಿ ವೆಚ್ಚದಲ್ಲಿ ಮನೆ ಕಟ್ಟಿಸಿಕೊಡಲು ಚಿಂತನೆ ನಡೆಸಲಾಗಿದೆ ಎಂದು ಸಚಿವರು ಹೇಳಿದರು.