ವಸತಿಯುತ ಶಾಲೆಯ ಹೆಣ್ಣು ಮಕ್ಕಳಿಗೆ ರಾಜ್ಯ ಸರ್ಕಾರ ಗುಡ್ ನ್ಯೂಸ್ ನೀಡಿದೆ. ಸ್ವರಕ್ಷಣೆಗಾಗಿ ಕರಾಟೆ ಕಲಿಸಲು 1000 ಕರಾಟೆ ಶಿಕ್ಷಕರನ್ನು ನೇಮಿಸಿಕೊಳ್ಳಲು ರಾಜ್ಯ ಸರ್ಕಾರ ಚಿಂತನೆ ನಡೆಸಿದೆ.
ಸಮಾಜ ಕಲ್ಯಾಣ ಇಲಾಖೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಶನಿವಾರದಂದು ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ಸಮೀಪದ ಸಾಲ್ಮರದಲ್ಲಿ ದೇವರಾಜು ಅರಸು ಭವನ ಉದ್ಘಾಟಿಸಿ ಈ ವಿಷಯ ತಿಳಿಸಿದ್ದಾರೆ.
ಹೆಣ್ಣು ಮಕ್ಕಳು ಕರಾಟೆ ಕಲಿತರೆ ಸ್ವರಕ್ಷಣೆಗೆ ಪ್ರಯೋಜನವಾಗಲಿದೆ. ಈ ಹಿನ್ನೆಲೆಯಲ್ಲಿ ಸರ್ಕಾರ ಚಿಂತನೆ ನಡೆಸಿದೆ ಎಂದು ಹೇಳಿದ ಸಚಿವರು, ಈ ಬಾರಿ ದೀನದಯಾಳ್ ಉಪಾಧ್ಯಾಯ ಹೆಸರಲ್ಲಿ ಸಾವಿರ ವಿದ್ಯಾರ್ಥಿಗಳ ಸಾಮರ್ಥ್ಯದ 5 ವಸತಿ ಶಾಲೆಗಳನ್ನು ತೆರೆಯಲಾಗುತ್ತದೆ ಎಂದು ಮಾಹಿತಿ ನೀಡಿದರು.