ಯುವತಿಯೊಬ್ಬಳು ತನ್ನೊಂದಿಗೆ ಸಲುಗೆಯಿಂದಿದ್ದ ವೇಳೆ ತೆಗೆದುಕೊಂಡಿದ್ದ ಫೋಟೋಗಳನ್ನು ಆಕೆಯ ಚಿಕ್ಕಮ್ಮನ ಮೊಬೈಲಿಗೆ ವಾಟ್ಸಾಪ್ ಮೂಲಕ ಕಳುಹಿಸಿದ ಆರೋಪಿ ವಿರುದ್ಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸೊರಬದ ಇಸಾಕ್ ವಿರುದ್ಧ 24 ವರ್ಷದ ಯುವತಿ ದೂರು ನೀಡಿದ್ದು, ಈಕೆ ಆತನ ಜೊತೆ ಈ ಹಿಂದೆ ಆತ್ಮೀಯವಾಗಿದ್ದ ವೇಳೆ ಫೋಟೋಗಳನ್ನು ತೆಗೆದುಕೊಳ್ಳಲಾಗಿತ್ತು ಎಂದು ಹೇಳಲಾಗಿದೆ.
ಆದರೆ ಯುವತಿಗೆ ಮದುವೆ ನಿಶ್ಚಯವಾಗಿದ್ದ ಹಿನ್ನೆಲೆಯಲ್ಲಿ ಇಸಾಕ್ ಜೊತೆ ಮಾತನಾಡುವುದನ್ನು ಆಕೆ ನಿಲ್ಲಿಸಿದ್ದಳು. ಇದರಿಂದ ಆಕ್ರೋಶಗೊಂಡ ಆತ, ಯುವತಿ ಚಿಕ್ಕಮ್ಮನ ಮೊಬೈಲಿಗೆ ವಾಟ್ಸಾಪ್ ಮೂಲಕ ಖಾಸಗಿ ಫೋಟೋಗಳನ್ನು ಕಳುಹಿಸಿದ್ದಾನೆ.