ತಮ್ಮ ಮಾಸ್ ಸಿನಿಮಾಗಳ ಮೂಲಕ ಸಾಕಷ್ಟು ಅಭಿಮಾನಿ ಬಳಗ ಹೊಂದಿರುವ ನಟ ಧನ್ವೀರ್ ಗೌಡ ಇತ್ತೀಚೆಗೆ ‘ವಾಮನ’ ಶೂಟಿಂಗ್ ನಲ್ಲಿ ಬಿಜಿಯಾಗಿದ್ದಾರೆ.
ವಾಮನ ಸಿನಿಮಾದ ರೋಮ್ಯಾಂಟಿಕ್ ಮೆಲೋಡಿ ವಿಡಿಯೋ ಹಾಡೊಂದನ್ನು ನಿನ್ನೆ ಏಟು ಮ್ಯೂಸಿಕ್ ಯೂಟ್ಯೂಬ್ ಚಾನೆಲ್ ನಲ್ಲಿ ಬಿಡುಗಡೆ ಮಾಡಲಾಗಿದೆ. ವಿಜಯ್ ಪ್ರಕಾಶ್ ಮತ್ತು ಹರ್ಷಿಕಾ ದೇವನಾಥ್ ಈ ಹಾಡಿಗೆ ಧ್ವನಿಯಾಗಿದ್ದು, ವಿ ನಾಗೇಂದ್ರ ಪ್ರಸಾದ್ ಸಾಹಿತ್ಯ ಬರೆದಿದ್ದಾರೆ
‘ಮುದ್ದು ರಾಕ್ಷಸಿ’ ಎಂಬ ಈ ಹಾಡು ರಿಲೀಸ್ ಆದ ಕೆಲವೇ ಗಂಟೆಗಳಲ್ಲಿ ಸಾಕಷ್ಟು ವೀಕ್ಷಣೆ ಪಡೆದುಕೊಳ್ಳುವ ಮೂಲಕ ಯೂಟ್ಯೂಬ್ ನಲ್ಲಿ ಧೂಳೆಬ್ಬಿಸಿದೆ. ಶಂಕರ್ ರಾಮನ್ ನಿರ್ದೇಶನದ ಈ ಚಿತ್ರದಲ್ಲಿ ನಟ ದನ್ವೀರ್ ಗೆ ಜೋಡಿಯಾಗಿ ರೇಷ್ಮಾ ನಾಣಯ್ಯ ಅಭಿನಯಿಸಿದ್ದು, ಅಜನೀಶ್ ಲೋಕನಾಥ್ ಸಂಗೀತ ಸಂಯೋಜನೆ ಮಾಡಿದ್ದಾರೆ. ಈಕ್ವಿನಾಕ್ಸ್ ಗ್ಲೋಬಲ್ ಎಂಟರ್‌ಟೈನ್ಮೆಂಟ್ ಲಾಂಛನದಲ್ಲಿ ಚೇತನ್ ಗೌಡ ಬಂಡವಾಳ ಹೂಡಿದ್ದಾರೆ.