alex Certify ವಾರದ ಅಂತರದಲ್ಲೇ ಮತ್ತೊಂದು ಆಘಾತಕಾರಿ ಘಟನೆ; ಸಮಾರಂಭದಲ್ಲಿ ಪಾಲ್ಗೊಂಡಿದ್ದಾಗಲೇ ಏಕಾಏಕಿ ಕುಸಿದು ಬಿದ್ದು ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ವಾರದ ಅಂತರದಲ್ಲೇ ಮತ್ತೊಂದು ಆಘಾತಕಾರಿ ಘಟನೆ; ಸಮಾರಂಭದಲ್ಲಿ ಪಾಲ್ಗೊಂಡಿದ್ದಾಗಲೇ ಏಕಾಏಕಿ ಕುಸಿದು ಬಿದ್ದು ಸಾವು

ಕರ್ನಾಟಕದ ಉಡುಪಿ ಜಿಲ್ಲೆ ಕುಂದಾಪುರ ತಾಲೂಕಿನ ಗ್ರಾಮ ಒಂದರಲ್ಲಿ ಸಮಾರಂಭದಲ್ಲಿ ಪಾಲ್ಗೊಂಡಿದ್ದ ಯುವತಿಯೊಬ್ಬರು ಏಕಾಏಕಿ ಕುಸಿದು ಬಿದ್ದು ಸಾವನ್ನಪ್ಪಿರುವ ಆಘಾತಕಾರಿ ಘಟನೆ ಬೆನ್ನಲ್ಲೇ ಈಗ ಮತ್ತೊಂದು ಪ್ರಕರಣ ನಡೆದಿದೆ.

ವಾರಣಾಸಿಯಲ್ಲಿ ಈ ಘಟನೆ ನಡೆದಿದ್ದು, ವ್ಯಕ್ತಿಯೊಬ್ಬರು ಸಮಾರಂಭದಲ್ಲಿ ನೃತ್ಯ ಮಾಡುತ್ತಿದ್ದಾಗ ಏಕಾಏಕಿ ಕುಸಿದು ಬಿದ್ದಿದ್ದು, ಕೂಡಲೇ ಆಸ್ಪತ್ರೆಗೆ ಸಾಗಿಸಲಾಯಿತಾದರೂ ಅಷ್ಟರಲ್ಲಾಗಲೇ ಮೃತಪಟ್ಟಿದ್ದಾರೆ.

ಪತ್ರಕರ್ತ ಪುನೀತ್ ಕುಮಾರ್ ಸಿಂಗ್ ಎಂಬವರು ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಇದರ ವಿಡಿಯೋ ಹಂಚಿಕೊಂಡಿದ್ದು, ಆರೋಗ್ಯವಂತರಾಗಿ ಲವಲವಿಕೆಯಿಂದ ಇದ್ದ ಜನರೇಕೆ ಹೀಗೆ ಏಕಾಏಕಿ ಕುಸಿದು ಬಿದ್ದು ಸಾವನ್ನಪ್ಪುತ್ತಿದ್ದಾರೆ. ಇದನ್ನು ತಿಳಿದುಕೊಳ್ಳುವ ಸಲುವಾಗಿ ಸರ್ಕಾರ ಕ್ರಮ ವಹಿಸಬೇಕು ಎಂದು ಒತ್ತಾಯಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...