
ಈ ಸಂಬಂಧ ನಗರಾಭಿವೃದ್ಧಿ ಇಲಾಖೆಯಿಂದ ತಿದ್ದುಪಡಿ ಆದೇಶವನ್ನು ಹೊರಡಿಸಲಾಗಿದ್ದು, ಇದನ್ನು ರಾಜ್ಯಪತ್ರದಲ್ಲಿ ಪ್ರಕಟಿಸಲಾಗಿದೆ. ಸರ್ಕಾರದ ಈ ಹೊಸ ನೀತಿಯಿಂದ 5 ಲಕ್ಷಕ್ಕೂ ಅಧಿಕ ಕುಟುಂಬಗಳಿಗೆ ಅನುಕೂಲವಾಗಲಿದೆ ಎಂದು ಮೂಲಗಳು ತಿಳಿಸಿವೆ.
ಇಂಧನ ಸಚಿವ ವಿ. ಸುನಿಲ್ ಕುಮಾರ್ ಕೂಡ ಈ ಕುರಿತು ಟ್ವೀಟ್ ಮಾಡಿದ್ದು, ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಜಾರಿಗೆ ತಂದಿದ್ದ ಕತ್ತಲೆ ಭಾಗ್ಯದ ಕಾನೂನನ್ನು ನಮ್ಮ ಸರ್ಕಾರ ಬದಲಾಯಿಸಿದೆ. ಇದರಿಂದಾಗಿ ಬಿಬಿಎಂಪಿ ವ್ಯಾಪ್ತಿಯಲ್ಲಿ ಸುಮಾರು 5 ಲಕ್ಷ ಕುಟುಂಬಗಳಿಗೆ ಅನುಕೂಲವಾಗಲಿದೆ ಎಂದು ತಿಳಿಸಿದ್ದಾರೆ.