ಪುರೋಹಿತರ ಮನೆಯಲ್ಲಿ ಅಥವಾ ದೇವಾಲಯಗಳಲ್ಲಿ ಹೋಮ ಹವನವನ್ನು ಮಾಡಲು ಹೋಮದ ಕುಂಡಗಳನ್ನು ಸ್ಥಾಪಿಸುತ್ತಾರೆ. ಆದರೆ ವಾಸ್ತು ಶಾಸ್ತ್ರದ ಪ್ರಕಾರ ಈ ಹೋಮ ಕುಂಡಗಳನ್ನು ಯಾವ ದಿಕ್ಕಿನಲ್ಲಿ ನಿರ್ಮಿಸಿದರೆ ಉತ್ತಮ ಎಂಬುದನ್ನು ತಿಳಿದುಕೊಳ್ಳಿ.
ವಾಸ್ತು ಶಾಸ್ತ್ರದ ಪ್ರಕಾರ ಬೆಂಕಿಗೆ ಸಂಬಂಧಿಸಿದ ಯಾವುದೇ ಕೆಲಸವನ್ನು ದಕ್ಷಿಣ ದಿಕ್ಕಿನಲ್ಲಿ ಮಾಡಿದರೆ ತುಂಬಾ ಉತ್ತಮ. ಏಕೆಂದರೆ ದಕ್ಷಿಣ ದಿಕ್ಕು ಬೆಂಕಿಗೆ ಸಂಬಂಧಿಸಿದೆ. ಹಾಗಾಗಿ ಹೋಮ ಕುಂಡಗಳನ್ನು ದಕ್ಷಿಣ ದಿಕ್ಕಿನಲ್ಲಿ ನಿರ್ಮಿಸಿದರೆ ಉತ್ತಮ, ಈ ದಿಕ್ಕಿನಲ್ಲಿ ನಿರ್ಮಿಸಿದ ಹೋಮ ಕುಂಡದಲ್ಲಿ ಪೂಜೆಗಳನ್ನು ಮಾಡಿಸಿದರೆ ಅಂತಹ ಕುಟುಂಬದವರ ಆರೋಗ್ಯ ಉತ್ತಮವಾಗಿರುತ್ತದೆ.
ನಿಮ್ಮ ಕುಟುಂಬದಲ್ಲಿ ಯಾವುದೇ ಸಮಸ್ಯೆ ಉಂಟಾಗುವುದಿಲ್ಲ. ಹಾಗೇ ನೀವು ಹೋಮ ಕುಂಡದ ಬಳಿ ಪೂಜೆಗೆ ಕುಳಿತುಕೊಳ್ಳುವಾಗ ಪೂರ್ವಕ್ಕೆ ಮುಖ ಮಾಡಿ ಕುಳಿತುಕೊಳ್ಳುವಂತೆ ಪಂಡಿತರು ಹೇಳುತ್ತಾರೆ.