ಬೆಂಗಳೂರು: ಇನ್ಮುಂದೆ ವಾಹನ ಸವಾರರು ಸಂಚಾರಿ ನಿಯಮ ಉಲ್ಲಂಘನೆ ಮಾಡಿದರೆ ಅಂತವರ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಾಗಲಿದೆ.
ಒನ್ ವೇಯಲ್ಲಿ ಸಂಚರಿಸುವುದು, ನೋ ಪಾರ್ಕಿಂಗ್ ನಲ್ಲಿ ವಾಹನ ನಿಲುಗಡೆ, ರಸ್ತೆಯಲ್ಲಿ ವಾಹನ ನಿಲ್ಲಿಸುವುದು, ಸಿಗ್ನಲ್ ಜಂಪ್ ಸೇರಿದಂತೆ ನಿಯಮ ಉಲ್ಲಂಘನೆ ಮಾಡಿದರೆ ಐಪಿಸಿ ಸೆಕ್ಷನ್ 283ರಡಿ ಪೊಲೀಸರು ಎಫ್ ಐ ಆರ್ ದಾಖಲಿಸಿ ವಾಹನದ ಮೇಲೆ ಹಾಗೂ ಚಾಲಕನ ಮೇಲೆ ಕ್ರಿಮಿನಲ್ ಕೇಸ್ ದಾಖಲಿಸಲಿದ್ದಾರೆ.
ಒಮ್ಮೆ ಎಫ್ ಐ ಆರ್ ದಾಖಲಾದ್ರೆ ವಾಹನ ಸೀಜ್ ಮಾಡಲಾಗುತ್ತದೆ. ಹೀಗೆ ಸೀಜ್ ಆದ ವಾಹನವನ್ನು ನ್ಯಾಯಾಲಯದ ಅನುಮತಿ ಪಡೆದು ಬಿಡಿಸಿಕೊಳ್ಳಬೇಕಾಗುತ್ತದೆ.