alex Certify ವಾಹನ ಸವಾರರೇ ಎಚ್ಚರ: ಎಲ್ಲೆಂದರಲ್ಲಿ ವೆಹಿಕಲ್ ನಿಲ್ಲಿಸಿದರೆ ಬೀಳುತ್ತೆ ಭಾರಿ ದಂಡ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ವಾಹನ ಸವಾರರೇ ಎಚ್ಚರ: ಎಲ್ಲೆಂದರಲ್ಲಿ ವೆಹಿಕಲ್ ನಿಲ್ಲಿಸಿದರೆ ಬೀಳುತ್ತೆ ಭಾರಿ ದಂಡ

ನಗರ ಪ್ರದೇಶಗಳಲ್ಲಿ ವಾಹನ ನಿಲ್ಲಿಸುವುದೇ ಬಹುದೊಡ್ಡ ಸಮಸ್ಯೆ. ಅಡ್ಡಾದಿಡ್ಡಿಯಾಗಿ ಪಾರ್ಕಿಂಗ್ ಮಾಡುವ ಕಾರಣ ಇತರೆ ವಾಹನಗಳ ಸಂಚಾರಕ್ಕೆ ಅಡ್ಡಿಯಾಗುವುದಲ್ಲದೆ ಜನದಟ್ಟಣೆಗೂ ಕಾರಣವಾಗುತ್ತದೆ.

ಹೀಗಾಗಿ ಈ ರೀತಿ ಪಾರ್ಕಿಂಗ್ ಮಾಡುವವರಿಗೆ ಚುರುಕು ಮುಟ್ಟಿಸಲು ಮುಂದಾಗಿರುವ ಕೇಂದ್ರ ಸರ್ಕಾರ ಒಂದು ಸಾವಿರ ರೂಪಾಯಿ ದಂಡ ವಿಧಿಸಲು ಮುಂದಾಗಿದೆ. ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಈ ಕುರಿತು ಮಾಹಿತಿ ನೀಡಿದ್ದಾರೆ.

ಎಲ್ಲಕ್ಕಿಂತ ಮುಖ್ಯವಾಗಿ ಈ ರೀತಿ ಅಡ್ಡಾದಿಡ್ಡಿ ಪಾರ್ಕಿಂಗ್ ಮಾಡಿರುವ ವಾಹನಗಳ ಫೋಟೋಗಳನ್ನು ಸಾರ್ವಜನಿಕರು ಕಳುಹಿಸಬಹುದಾಗಿದ್ದು, ಅವರುಗಳಿಗೆ 500 ರೂಪಾಯಿ ಬಹುಮಾನ ನೀಡಲಾಗುತ್ತದೆ. ಅಂದರೆ ಅಂತಹ ವಾಹನಗಳ ಮಾಲೀಕರಿಗೆ 1000 ರೂಪಾಯಿ ದಂಡ ವಿಧಿಸಿದರೆ ಅದರಲ್ಲಿ 500 ರೂಪಾಯಿಗಳನ್ನು ಫೋಟೋ ಕಳುಹಿಸಿದವರಿಗೆ ನೀಡಲಾಗುತ್ತದೆ. ಈ ಕುರಿತ ಆದೇಶ ಶೀಘ್ರದಲ್ಲೇ ಹೊರಬೀಳುವ ನಿರೀಕ್ಷೆಯಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...