alex Certify ವಿಡಿಯೋ ಮಾಡಿಟ್ಟು ನಿದ್ದೆ ಮಾತ್ರೆ ಸೇವಿಸಿ ಆತ್ಮಹತ್ಯೆಗೆ ಶರಣಾದ ಮಹಿಳೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ವಿಡಿಯೋ ಮಾಡಿಟ್ಟು ನಿದ್ದೆ ಮಾತ್ರೆ ಸೇವಿಸಿ ಆತ್ಮಹತ್ಯೆಗೆ ಶರಣಾದ ಮಹಿಳೆ

ಕೋಲಾರ: ಮಹಿಳೆಯೋರ್ವರು ವಿಡಿಯೋ ಮಾಡಿಟ್ಟು ನಿದ್ದೆ ಮಾತ್ರೆ ಸೇವಿಸಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಕೋಲಾರ ಜಿಲ್ಲೆ ಬಂಗಾರಪೇಟೆ ತಾಲೂಕಿನ ಅತ್ತಗಿರಿಕೊಪ್ಪ ಗ್ರಾಮದಲ್ಲಿ ನಡೆದಿದೆ.

ಲಕ್ಷ್ಮಿದೇವಮ್ಮ ಆತ್ಮಹತ್ಯೆಗೆ ಶರಣಾದ ಮಹಿಳೆ. ಮೀಟರ್ ಬಡ್ಡಿಗೆ ಬೇಸತ್ತು ಮಹಿಳೆ ಆತ್ಮಹತ್ಯೆ ಮಾಡಿಕೊಂಡಿದ್ದಾಗಿ ತಿಳಿದು ಬಂದಿದೆ. ವಿಡಿಯೋದಲ್ಲಿ ಮೂವರ ವಿರುದ್ಧ ಆರೋಪ ಮಾಡಿದ್ದು, ಈ ಹಿನ್ನೆಲೆಯಲ್ಲಿ ಮೂವರು ಆರೋಪಿಗಳ ವಿರುದ್ಧ ಪ್ರಕರಣ ದಾಖಲಾಗಿದೆ.

ಲಕ್ಷ್ಮಿದೇವಮ್ಮ, ಬಂಗಾರಪೇಟೆ ಹಾಗೂ ಹುಲಿಬೆಲೆ ಗ್ರಾಮದ ಕೆಲವರ ಬಳಿ ಸಾಲ ಪಡೆದಿದ್ದರು. ಸ್ವಲ್ಪ ಸ್ವಲ್ಪವಾಗಿ ಸಾಲ ತೀರಿಸುತ್ತಿದ್ದರು. ಆದರೆ ಬಡ್ಡಿದರ ಹೆಚ್ಚುತ್ತಲೇ ಇತ್ತು. ಹಣ ನೀಡಲು ಸ್ವಲ್ಪ ತಡವಾದರೂ ಮನೆ ಕೆಡವುದಾಗಿ, ಮಹಿಳೆಗೆ ಬೆದರಿಕೆ ಹಾಕುತ್ತಿದ್ದರಲ್ಲದೇ ಅವಾಚ್ಯ ಶಬ್ಧಗಳಿಂದ ನಿಂದಿಸಿ ಕಿರುಕುಳ ನೀಡುತ್ತಿದ್ದರು ಎಂದು ಮಹಿಳೆ ಆರೋಪಿಸಿದ್ದಾರೆ.

ಬೆದರಿಕೆ ಹಾಗೂ ಕಿರುಕುಳಕ್ಕೆ ಬೇಸತ್ತು ಮಹಿಳೆ ಆತ್ಮಹತ್ಯೆಗೆ ನಿರ್ಧರಿಸಿದ್ದಾಗಿ ವಿಡಿಯೋದಲ್ಲಿ ತಿಳಿಸಿದ್ದಾರೆ. ಆತ್ಮಹತ್ಯೆಗೆ ಯತ್ನಿಸಿದ್ದ ಮಹಿಳೆಯನ್ನು ಆರ್.ಎಲ್.ಜಾಲಪ್ಪ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...