ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಸುಕೇಶ್ ಚಂದ್ರಶೇಖರ್ ಪ್ರಕರಣದಲ್ಲಿ ಬಾಲಿವುಡ್ ನಟಿ ಜಾಕ್ವೆಲಿನ್ ಫರ್ನಾಂಡಿಸ್ ಕೂಡಾ ಆರೋಪ ಎದುರಿಸುತ್ತಿದ್ದಾರೆ.
ಈಗಾಗಲೇ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಹಲವು ಬಾರಿ ಅವರ ವಿಚಾರಣೆ ನಡೆಸಿದ್ದು, ಇದರ ಮಧ್ಯೆ ತಾವು ವಿದೇಶಕ್ಕೆ ಪ್ರಯಾಣ ಮಾಡಲು ಅನುಮತಿ ನೀಡುವಂತೆ ಜಾಕ್ವೆಲಿನ್ ಫರ್ನಾಂಡಿಸ್ ನ್ಯಾಯಾಲಯದ ಅನುಮತಿ ಕೋರಿದ್ದರು.
ಆದರೆ ಶ್ರೀಲಂಕಾ ಪಾಸ್ಪೋರ್ಟ್ ಹೊಂದಿರುವ ಜಾಕ್ವೆಲಿನ್ ಫರ್ನಾಂಡಿಸ್ ಮತ್ತೆ ವಾಪಸ್ ಬರುವ ಸಾಧ್ಯತೆ ಇಲ್ಲವೆಂದು ಜಾರಿ ನಿರ್ದೇಶನಾಲಯ ನ್ಯಾಯಾಲಯಕ್ಕೆ ತಿಳಿಸಿದ್ದು, ನ್ಯಾಯಾಲಯ ಕೂಡಾ ಪ್ರಕರಣ ನಿರ್ಣಾಯಕ ಹಂತದಲ್ಲಿದೆ ಎಂದು ಹೇಳಿದೆ. ಹೀಗಾಗಿ ಜಾಕ್ವೆಲಿನ್ ಫರ್ನಾಂಡಿಸ್ ತಮ್ಮ ಅರ್ಜಿಯನ್ನು ಹಿಂಪಡೆದುಕೊಂಡಿದ್ದಾರೆ.