alex Certify ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಶಾಲಾ ಪಠ್ಯದ ಭಾಗವಾಗಿರಲಿದೆ ಚಿನ್ನಿದಾಂಡು, ಕುಂಟೆಬಿಲ್ಲೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಶಾಲಾ ಪಠ್ಯದ ಭಾಗವಾಗಿರಲಿದೆ ಚಿನ್ನಿದಾಂಡು, ಕುಂಟೆಬಿಲ್ಲೆ

Remember These Childhood Games? | Hindi Movies | English Moviesಗ್ರಾಮೀಣ ಕ್ರೀಡೆಗಳು ನಶಿಸಿ ಹೋಗುತ್ತಿರುವ ಮಧ್ಯೆ ‘ನೂತನ ರಾಷ್ಟ್ರೀಯ ಶಿಕ್ಷಣ ನೀತಿ’ ಅವುಗಳಿಗೆ ಮತ್ತೆ ಎಂದಿನ ವೈಭವ ತರಲು ಮುಂದಾಗಿದೆ. ಹೀಗಾಗಿ ನೂತನ ರಾಷ್ಟ್ರೀಯ ಶಿಕ್ಷಣ ನೀತಿ ಎರಡು ವರ್ಷ ಪೂರೈಸಿದ ಬೆನ್ನಲ್ಲೇ ಮಹತ್ವದ ತೀರ್ಮಾನ ಕೈಗೊಳ್ಳಲಾಗಿದೆ.

ಸಾಂಪ್ರದಾಯಿಕ ದೇಶಿ ಕ್ರೀಡೆಗಳಾದ ಚಿನ್ನಿ ದಾಂಡು, ಕುಂಟೆಬಿಲ್ಲೆ, ಗಾಳಿಪಟ ಹಾರಿಸುವುದು, ಗೋಲಿ ಸೇರಿದಂತೆ 75 ಭಾರತೀಯ ಆಟಗಳನ್ನು ಪಠ್ಯದ ಭಾಗವಾಗಿ ಸೇರಿಸಲು ನಿರ್ಧರಿಸಲಾಗಿದೆ.

ಈ ಮೊದಲು ಇಂತಹ ಕ್ರೀಡೆಗಳು ಬಹುತೇಕ ಗ್ರಾಮೀಣ ಪ್ರದೇಶದ ಭಾಗವಾಗಿದ್ದು, ನಂತರ ಇತರೆ ಕ್ರೀಡೆಗಳಿಗೆ ಹೆಚ್ಚಿನ ಆದ್ಯತೆ ನೀಡಿದ ಹಿನ್ನೆಲೆಯಲ್ಲಿ ಮರೆಯಾಗಿದ್ದವು. ಅಲ್ಲದೆ ಪ್ರತಿಯೊಂದು ಗ್ರಾಮದಲ್ಲೂ ಮುಂಚೆ ಗರಡಿ ಮನೆಗಳಿದ್ದು, ಕಾಲಕ್ರಮೇಣ ಅವುಗಳು ಮುಚ್ಚಿ ಹೋಗಿದ್ದವು.

ಈಗ ಸಾಂಪ್ರದಾಯಿಕ ಗ್ರಾಮೀಣ ಕ್ರೀಡೆಗಳಿಗೆ ಆದ್ಯತೆ ಸಿಗುವ ಹಿನ್ನೆಲೆಯಲ್ಲಿ ಗ್ರಾಮಾಂತರ ಪ್ರದೇಶಗಳಿಂದ ಹೆಚ್ಚಿನ ಸಂಖ್ಯೆಯ ಪ್ರತಿಭಾವಂತ ಕ್ರೀಡಾಪಟುಗಳು ಬೆಳಕಿಗೆ ಬರಲಿದ್ದಾರೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...