alex Certify ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ: ಈ ವಾರ ‘SSLC’ ಫಲಿತಾಂಶ ಬಿಡುಗಡೆ ಸಾಧ್ಯತೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ: ಈ ವಾರ ‘SSLC’ ಫಲಿತಾಂಶ ಬಿಡುಗಡೆ ಸಾಧ್ಯತೆ

ಬೆಂಗಳೂರು : ಈಗಾಗಲೇ ಎಸ್ ಎಸ್ ಎಲ್ ಸಿ (SSLC) ಪರೀಕ್ಷೆಯ ಮೌಲ್ಯಮಾಪನ ಪೂರ್ಣಗೊಂಡಿದ್ದು, ಪರೀಕ್ಷೆ ಫಲಿತಾಂಶ ಬಿಡುಗಡೆಗೆ ಕೌಂಟ್ ಡೌನ್ ಶುರುವಾಗಿದೆ. ಇದೇ ವಾರ ಎಸ್ ಎಸ್ ಎಲ್ ಸಿ ಫಲಿತಾಂಶ ( Result) ಪ್ರಕಟವಾಗುವ ಸಾಧ್ಯತೆ ಇದೆ ಎಂದು ನಿರೀಕ್ಷಿಸಲಾಗಿದೆ.

ಹೌದು, ಕರ್ನಾಟಕ ಎಸ್ಎಸ್ಎಲ್ಸಿ 2023 ರ ಮೌಲ್ಯಮಾಪನ ಪ್ರಕ್ರಿಯೆ ಪೂರ್ಣಗೊಂಡಿದ್ದು, ಅತಿ ಶೀಘ್ರದಲ್ಲಿ ಫಲಿತಾಂಶ ಹೊರಬೀಳಲಿದೆ. ಇದೇ ವಾರ ಫಲಿತಾಂಶ ಪ್ರಕಟವಾಗಬಹುದು ಎನ್ನಲಾಗಿದೆ.

ವಿದ್ಯಾರ್ಥಿಗಳು karresults.nic.in ಮತ್ತು kseab.karnataka.gov.in. ಮೂಲಕ ಫಲಿತಾಂಶವನ್ನು ಪರಿಶೀಲಿಸಬಹುದಾಗಿದೆ. ಅಧಿಕೃತ ವೆಬ್ಸೈಟ್-karresults.nic.in ಗೆ ಹೋಗಿ, ಮುಖಪುಟದಲ್ಲಿ, ಕರ್ನಾಟಕ SSLC 2023 ಫಲಿತಾಂಶ ಲಿಂಕ್ ಅನ್ನು ಕ್ಲಿಕ್ ಮಾಡಿದರೆ ಹೊಸ ಲಾಗಿನ್ ಪುಟ ತೆರೆಯುತ್ತದೆ, ನಂತರ ನಿಮ್ಮ ನೋಂದಣಿ ಸಂಖ್ಯೆಯನ್ನು ( Register Number) ನಮೂದಿಸಿ ಮತ್ತು ವಿವರಗಳನ್ನು ಸಲ್ಲಿಸಿದರೆ ಫಲಿತಾಂಶ ವೀಕ್ಷಣೆ ಮಾಡಬಹುದಾಗಿದೆ. ಈ ಬಾರಿ ಎಸ್ಎಸ್ಎಲ್ ಸಿ ವಾರ್ಷಿಕ ಪರೀಕ್ಷೆಗೆ 8.60 ಲಕ್ಷವಿದ್ಯಾರ್ಥಿಗಳು ನೋಂದಣಿ (Register) ಮಾಡಿಕೊಂಡಿದ್ದರು.

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...