alex Certify ವಿದ್ಯಾರ್ಥಿಗಳೇ ಗಮನಿಸಿ: ನಿಗದಿಯಂತೆ ಮೇ 16 ರಂದು ಆರಂಭವಾಗಲಿದೆ ಶಾಲೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ವಿದ್ಯಾರ್ಥಿಗಳೇ ಗಮನಿಸಿ: ನಿಗದಿಯಂತೆ ಮೇ 16 ರಂದು ಆರಂಭವಾಗಲಿದೆ ಶಾಲೆ

ಈ ಬಾರಿ 1 ರಿಂದ 10ನೇ ತರಗತಿವರೆಗಿನ ವಿದ್ಯಾರ್ಥಿಗಳಿಗೆ ಶಾಲೆಯನ್ನು ಆರಂಭಿಸುವುದು ವಿಳಂಬವಾಗಬಹುದು ಎಂಬ ಮಾತುಗಳು ಕೇಳಿ ಬರುತ್ತಿತ್ತು. ಆದರೆ ನಿಗದಿಯಂತೆ ಮೇ 16 ರಂದು ರಾಜ್ಯಾದ್ಯಂತ ಶಾಲೆಗಳು ಆರಂಭವಾಗುತ್ತಿದ್ದು, ಇದಕ್ಕಾಗಿ ಈಗಾಗಲೇ ಸಕಲ ಸಿದ್ಧತೆಗಳು ನಡೆಯುತ್ತಿವೆ.

ಕೊರೊನಾ ಕಾರಣಕ್ಕೆ ಕಳೆದ ಎರಡು ವರ್ಷಗಳಿಂದ ಶಾಲಾ-ಕಾಲೇಜುಗಳು ನಿಗದಿತವಾಗಿ ನಡೆಯದ್ದರ ಮಧ್ಯೆ ಇದೀಗ ಮೇ 16ರಿಂದ ಪೂರ್ಣಪ್ರಮಾಣದಲ್ಲಿ 1ರಿಂದ 10ನೇ ತರಗತಿ ವಿದ್ಯಾರ್ಥಿಗಳಿಗೆ ಶಾಲೆಗಳು ಆರಂಭವಾಗುತ್ತಿದ್ದು ಹೀಗಾಗಿ ಶಿಕ್ಷಕರು ಹಾಗೂ ವಿದ್ಯಾರ್ಥಿ ಸಮೂಹದಲ್ಲಿ ಉತ್ಸಾಹ ಮನೆಮಾಡಿದೆ. ಬಹಳಷ್ಟು ಶಾಲೆಗಳಲ್ಲಿ ಶಿಕ್ಷಕರು, ಅಂದು ಶಾಲೆಗಳನ್ನು ತಳಿರು ತೋರಣಗಳಿಂದ ಸಿಂಗರಿಸಿ ವಿದ್ಯಾರ್ಥಿಗಳನ್ನು ಸ್ವಾಗತಿಸಲು ತಯಾರಿ ನಡೆಸಿದ್ದಾರೆ ಎಂದು ತಿಳಿದುಬಂದಿದೆ.

ಮೇ 16 ರಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ವಿದ್ಯಾರ್ಥಿಗಳ ಕಲಿಕಾ ಕೊರತೆ ನೀಗಿಸಲು ಆರಂಭಿಸಿರುವ ‘ಕಲಿಕಾ ಚೇತರಿಕೆ’ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ. ಆದರೆ ವಿವಿಧ ಕಾರಣಗಳಿಂದಾಗಿ ಈ ಬಾರಿ ವಿದ್ಯಾರ್ಥಿಗಳಿಗೆ ಪಠ್ಯಪುಸ್ತಕ ತಲುಪುವುದು ವಿಳಂಬವಾಗಲಿದೆ ಎನ್ನಲಾಗುತ್ತಿದ್ದು, ಶಿಕ್ಷಕರು ಇದನ್ನು ಯಾವ ರೀತಿ ನಿಭಾಯಿಸುತ್ತಾರೆ ಎಂಬುದನ್ನು ಕಾದು ನೋಡಬೇಕಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...