alex Certify ವಿದ್ಯಾರ್ಥಿಗಳ ನಡುವೆ ಕೋಮು ತಾರತಮ್ಯ ಉಂಟು ಮಾಡುತ್ತಿರುವವರ ವಿರುದ್ಧ ಸರ್ಕಾರ ಕ್ರಮ ಕೈಗೊಳ್ಳಲಿ: ಸಿದ್ದರಾಮಯ್ಯ ಗುಡುಗು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ವಿದ್ಯಾರ್ಥಿಗಳ ನಡುವೆ ಕೋಮು ತಾರತಮ್ಯ ಉಂಟು ಮಾಡುತ್ತಿರುವವರ ವಿರುದ್ಧ ಸರ್ಕಾರ ಕ್ರಮ ಕೈಗೊಳ್ಳಲಿ: ಸಿದ್ದರಾಮಯ್ಯ ಗುಡುಗು

ಹಿಜಾಬ್ ವಿವಾದದ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಮಾಜಿ ಸಿಎಂ ಹಾಗೂ ಕಾಂಗ್ರೆಸ್ ಹಿರಿಯ ನಾಯಕ ಸಿದ್ದರಾಮಯ್ಯ ಬಿಜೆಪಿ ನಾಯಕರನ್ನು ಹಾಗೂ ಕರ್ನಾಟಕ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ಸರ್ಕಾರದ ಹಾಗೂ ಸಚಿವರ ಹೇಳಿಕೆಗಳ ತುಣುಕುಗಳನ್ನ ಹಂಚಿಕೊಂಡು ನಿಮಗೆ ವಿವಾದ ಸೃಷ್ಟಿಸಿರುವವರ ಬಗ್ಗೆ ತಿಳಿದಿದ್ದರೆ ಕಾಲಹರಣ ಬಿಟ್ಟು ಕ್ರಮ ಕೈಗೊಳ್ಳಿ ಎಂದಿದ್ದಾರೆ‌.

ತಿಂಗಳ ಹಿಂದೆಯೇ ಹುಟ್ಟಿಕೊಂಡಿದ್ದ ಹಿಜಾಬ್-ಕೇಸರಿ ಶಾಲು ವಿವಾದ ಹೊತ್ತಿ ಉರಿಯತೊಡಗಿದ ನಂತರ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಅವರಿಗೆ ಇದರ ಹಿಂದೆ ಎಸ್.ಡಿ.ಪಿ.ಐ. – ಸಿ.ಎಫ್.ಐ. ಇರಬಹುದೆಂಬ ಶಂಕೆ ಮೂಡಿದೆಯಂತೆ. ಇಲ್ಲಿಯವರೆಗೆ ಗೃಹಸಚಿವರು, ಪೊಲೀಸರು, ಇಂಟಲಿಜೆನ್ಸ್ ಏನು ಮಾಡ್ತಿದ್ದರು ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

ಹಿಜಾಬ್-ಕೇಸರಿ ಶಾಲು ವಿವಾದದ ಹಿಂದೆ ಕಾಂಗ್ರೆಸ್ ಇದೆ ಎಂಬ ಬಿಜೆಪಿ ನಾಯಕರ ಆರೋಪದ ಹಿನ್ನೆಯಲ್ಲಿ ಸರಣಿ ಟ್ವಿಟ್ ಮೂಲಕ ಪ್ರತ್ಯುತ್ತರ ನೀಡಿರುವ ಸಿದ್ದರಾಮಯ್ಯ ಅವರು, ಗೃಹಸಚಿವ ಜ್ಞಾನೇಂದ್ರ ಆರಗ, ಸಚಿವ ಕೆ.ಎಸ್.ಈಶ್ವರಪ್ಪ ಸೇರಿದಂತೆ ಬಿಜೆಪಿ ನಾಯಕರು ಹಿಜಾಬ್-ಕೇಸರಿ ಶಾಲು ವಿವಾದದ ಹಿಂದೆ ಕಾಂಗ್ರೆಸ್ ಇದೆ ಎನ್ನುತ್ತಿದ್ದಾರೆ. ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಅವರಿಗೆ ಸಿ ಎಫ್ ಐ ಮೇಲೆ ಶಂಕೆಯಂತೆ. ಮೊದಲು ಇವರೆಲ್ಲರೂ ಕೂಡಿ ಒಂದು ತೀರ್ಮಾನಕ್ಕೆ ಬರುವುದು ಒಳ್ಳೆಯದು ಎಂದು ಹೇಳಿದ್ದಾರೆ.

ಮಹಿಳೆಯರ ಉಡುಪಿನ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ ರೇಣುಕಾಚಾರ್ಯ…!

ಎಸ್ಡಿಪಿಐಯೋ, ಸಿಎಫ್‌ಐಯೋ ವಿದ್ಯಾರ್ಥಿಗಳ ನಡುವೆ ಕೋಮುಸಂಘರ್ಷ ಹುಟ್ಟು ಹಾಕುತ್ತಿರುವವರು ಯಾರೇ ಇರಲಿ, ಅಂತಹವರನ್ನು ಗುರುತಿಸಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಿ. ಇನ್ನೂ ಶಂಕೆ-ಅನುಮಾನ ಎಂದು ಕಾಲಹರಣ ಯಾಕೆ ಮಾಡುತ್ತೀರಿ? ಆರೋಪಿಗಳ ಜೊತೆ ಏನಾದರೂ ಒಳಒಪ್ಪಂದ ನಡೆದಿದೆಯೇ? ಎಂದು ಮುಖ್ಯಮಂತ್ರಿಯನ್ನು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

ಹಿಜಾಬ್ ಧಾರಣೆಯ ಸರಿ-ತಪ್ಪು ಬಗ್ಗೆ ನ್ಯಾಯಾಲಯ ನಿರ್ಧರಿಸಲಿ, ಅಲ್ಲಿಯವರೆಗೆ ಕಾಯೋಣ. ಆದರೆ ವಿದ್ಯಾರ್ಥಿನಿಯರ ಮೇಲೆ ಹಲ್ಲೆಗೆ ಪ್ರಯತ್ನ, ಶಾಲೆಗೆ ಕಲ್ಲೆಸೆತ, ರಾಷ್ಟ್ರಧ್ವಜ ಸ್ತಂಭದಲ್ಲಿ ಕೇಸರಿ ಬಾವುಟ ಅಪರಾಧ ಹೌದಾದರೆ ಮೊದಲು ಈ ಪುಂಡ ವಿದ್ಯಾರ್ಥಿಗಳ ಮೇಲೆ ಕ್ರಮಕೈಗೊಳ್ಳಿ ಎಂದಿದ್ದಾರೆ.

ಹಿಜಾಬ್-ಕೇಸರಿ ಶಾಲು ವಿವಾದದ ಹಿಂದೆ ಯಾರಿದ್ದಾರೆಂದು ರಾಜ್ಯ ಸರಕಾರ ತನಿಖೆ ನಡೆಸಿ ಪತ್ತೆಹಚ್ಚಿ ಜನರಿಗೆ ತಿಳಿಸಲಿ. ವಿವಾದದ ಮುಂದೆ ಯಾರಿದ್ದಾರೆ ಎನ್ನುವುದನ್ನು ರಾಜ್ಯ, ದೇಶ, ವಿದೇಶದ ಜನತೆ ಲೈವ್ ವಿಡಿಯೋಗಳಲ್ಲಿ ನೋಡುತ್ತಿದ್ದಾರೆ. ಅವರ ವಿರುದ್ಧ ಕ್ರಮ ಯಾವಾಗ? ಎಂದು ಮುಖ್ಯಮಂತ್ರಿಯನ್ನು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...