ಬೆಂಗಳೂರು: ವಿದ್ಯುತ್ ದರ ಏರಿಕೆಯಿಂದಾಗಿ ಸಣ್ಣ ಕೈಗಾರಿಕೆಗಳು ಶಾಕ್ ಆಗಿದ್ದು, ಬಾಗಿಲು ಮುಚ್ಚುವ ಸ್ಥಿತಿ ಬಂದಿದೆ ಎಂದು ಬಿಜೆಪಿ ಎಂಎಲ್ ಸಿ ಎನ್.ರವಿಕುಮಾರ್ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಎಂಎಲ್ ಸಿ ರವಿಕುಮಾರ್, ವಿದ್ಯುತ್ ದರ ಏರಿಕೆಯಿಂದ ಉದ್ಯಮ ವಲಯ ಸಂಕಷ್ಟಕ್ಕೆ ಸಿಲುಕಿದೆ. ಸರ್ಕಾರದ ವಿರುದ್ಧ ಎಲ್ಲರೂ ಶಾಪ ಹಾಕುತ್ತಿದ್ದಾರೆ ಎಂದು ಕಿಡಿಕಾರಿದರು.
ಸೋಮವಾರ ಬಿಜೆಪಿ ಕಚೇರಿಯಲ್ಲಿ ನಾಯಕರು ಸಭೆ ನಡೆಸಲಿದ್ದಾರೆ. ವಿದ್ಯುತ್ ದರ ಏರಿಕೆ ಖಂಡಿಸಿ ಮುಂದಿನ ಹೋರಾಟದ ಬಗ್ಗೆ ರೂಪುರೇಷೆ ಬಗ್ಗೆ ಚರ್ಚಿಸಲಿದ್ದೇವೆ ಎಂದು ತಿಳಿಸಿದರು.