ಗ್ರಾಮೀಣ ಪ್ರದೇಶಗಳಲ್ಲಿ ವಿದ್ಯುತ್ ಸಮಸ್ಯೆ ಸದಾಕಾಲ ಇರುತ್ತದೆ. ಇದು ಕೃಷಿ ಮೇಲೂ ಸಹ ಪರಿಣಾಮ ಬೀರುತ್ತಿದ್ದು, ಒಮ್ಮೊಮ್ಮೆ ದಿನಗಟ್ಟಲೇ ವಿದ್ಯುತ್ ಕೈ ಕೊಡುವ ಕಾರಣ ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗೂ ಸಹ ವ್ಯಾಸಂಗಕ್ಕೆ ತೊಂದರೆಯಾಗುತ್ತದೆ.
ಇದೀಗ ರಾಜ್ಯ ಸರ್ಕಾರ ಶುಭ ಸುದ್ದಿಯೊಂದನ್ನು ನೀಡಿದ್ದು, ಪ್ರತಿ ತಿಂಗಳ ಮೂರನೇ ಶನಿವಾರ ಹಳ್ಳಿಗಳಲ್ಲಿ ವಿದ್ಯುತ್ ಅದಾಲತ್ ನಡೆಸುವ ಮೂಲಕ ವಿದ್ಯುತ್ ಪೂರೈಕೆ ಕುರಿತ ಸಮಸ್ಯೆಗಳನ್ನು ಪರಿಹರಿಸಲು ಮುಂದಾಗಿದೆ.
ಇಂಧನ ಸಚಿವ ಸುನಿಲ್ ಕುಮಾರ್ ಈ ಕುರಿತು ಎಸ್ಕಾಂ ಅಧಿಕಾರಿಗಳಿಗೆ ಸೂಚನೆ ನೀಡಿದ್ದು, ಎಲ್ಲ ಅಧಿಕಾರಿಗಳು ತಮ್ಮ ವ್ಯಾಪ್ತಿಯ ಹಳ್ಳಿಗಳಿಗೆ ಭೇಟಿ ನೀಡುವ ಮೂಲಕ ಗ್ರಾಮೀಣ ಪ್ರದೇಶದ ಜನತೆಯ ಅಹವಾಲನ್ನು ಆಲಿಸಿ ವಿದ್ಯುತ್ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಬೇಕೆಂದು ತಿಳಿಸಿದ್ದಾರೆ.