ಬೆಳಗಾವಿ: ಬೆಳಗಾವಿ ಸುವರ್ಣ ವಿಧಾನಸೌಧದಲ್ಲಿ ವಿಧಾನಮಂಡಲ ಚಳಿಗಾಲದ ಅಧಿವೇಶನ ಆರಂಭವಾಗಿದ್ದು, ಇಂದಿನಿಂದ 10 ದಿನಗಳ ಕಾಲ ನಡೆಯಲಿದೆ. ಅಧಿವೇಶನದ ಮೊದಲ ದಿನವೇ ಬಹುತೇಕ ಶಾಸಕರು ಗೈರಾಗಿರುವುದು ಕಂಡುಬಂದಿದೆ.
2 ವರ್ಷಗಳ ಬಳಿಕ ಬೆಳಗಾವಿ ಸುವರ್ಣಸೌಧದಲ್ಲಿ ಚಳಿಗಾಲದ ಅಧಿವೇಶನ ನಡೆಯುತ್ತಿದ್ದು, ಕಲಾಪದ ಮೊದಲ ದಿನವೇ ಆಡಳಿತ ಹಾಗೂ ವಿಪಕ್ಷ ಸದಸ್ಯರು ಗೈರಾಗಿದ್ದು, ಸದನದಲ್ಲಿ ಕುರ್ಚಿಗಳು ಖಾಲಿ ಖಾಲಿಯಾಗಿರುವುದು ಬೆಳಕಿಗೆ ಬಂದಿದೆ.
ವಿರುಷ್ಕ ದಂಪತಿ ಬಾಡಿಗಾರ್ಡ್ ಗೆ ಸಿಗುವ ಸಂಭಾವನೆ ಎಷ್ಟು ಗೊತ್ತಾ….?
ಅಧಿವೇಶನ ಆರಂಭಕ್ಕೂ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಅಧಿವೇಶನದಲ್ಲಿ ಅರ್ಥಪೂರ್ಣ ಚರ್ಚೆ ನಡೆಯಲಿ. ವಿಶೇಷವಾಗಿ ಉತ್ತರ ಕರ್ನಾಟಕ ಭಾಗದ ಸಮಸ್ಯೆಗಳು, ಅಭಿವೃದ್ಧಿ ವಿಚಾರ ಚರ್ಚೆ ಬಗ್ಗೆ ಹೆಚ್ಚಿನ ಆದ್ಯತೆ ನೀಡಲಾಗುವುದು ಎಂದು ಹೇಳಿದರು.
ಮತಾಂತರ ನಿಷೇಧ ಕಾಯ್ದೆ ಜಾರಿ ಬಗ್ಗೆ ಮಾತನಾಡಿದ ಸಿಎಂ, ಕಾನೂನು ತಜ್ಞರ ಸಲಹೆ ಪಡೆದು ಸದನದಲ್ಲಿ ಮಡಿಸಲಾಗುವುದು. ಹಲವು ಕಾನೂನುಗಳ ಬಗ್ಗೆ ಪರ-ವಿರೋಧ ಇದ್ದೇ ಇರುತ್ತದೆ. ಆದರೆ ಸರ್ಕಾರ ಜನ ಹಿತಕ್ಕಾಗಿ ಕೆಲ ಕಾನೂನು ತರಬೇಕಾಗುತ್ತದೆ. ಈ ನಿಟ್ಟಿನಲ್ಲಿ ಮಸೂದೆ ಮಂಡನೆ ಬಗ್ಗೆ ಚಿಂತನೆ ನಡೆಸಲಾಗಿದೆ ಎಂದು ತಿಳಿಸಿದರು.