ಪಂಜಾಬ್ ಕಾಂಗ್ರೆಸ್ ಸರ್ಕಾರದಲ್ಲಿ ಎಲ್ಲವೂ ಸರಿಯಿಲ್ಲ ಎಂಬುದು ಪದೇ ಪದೇ ಬಹಿರಂಗವಾಗುತ್ತಿದೆ. ಮುಖ್ಯಮಂತ್ರಿ ಅಮರಿಂದರ್ ಸಿಂಗ್ ವಿರುದ್ಧ ತಿರುಗಿ ಬಿದ್ದಿರುವ ಪ್ರಭಾವಿ ನಾಯಕ ನವಜೋತ್ ಸಿಂಗ್ ಸಿದ್ದು ತಮ್ಮ ಅಸಮಾಧಾನವನ್ನು ವ್ಯಕ್ತಪಡಿಸುತ್ತಲೇ ಇದ್ದಾರೆ. ಮಾತುಕತೆ ನಡೆಸಲು ಕಾಂಗ್ರೆಸ್ ಹಿರಿಯ ನಾಯಕರು ಮುಂದಾಗಿದ್ದರೂ ಯಾವುದೇ ಪ್ರಯೋಜನವಾಗಿಲ್ಲ.
ಇದೀಗ ವಿಧಾನಸಭಾ ಚುನಾವಣೆ ಸಮೀಪಿಸುತ್ತಿರುವ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಮತ್ತೊಂದು ಶಾಕ್ ಎದುರಾಗುವ ಸಾಧ್ಯತೆ ಇದೆ. ನವಜೋತ್ ಸಿಂಗ್ ಸಿದ್ದು ಕಾಂಗ್ರೆಸ್ ತೊರೆದು ಆಮ್ ಆದ್ಮಿ ಪಾರ್ಟಿ ಸೇರಲಿದ್ದಾರೆ ಎಂಬ ಮಾತುಗಳು ಕೇಳಿಬರುತ್ತಿದ್ದು, ಇದಕ್ಕೆ ಪುಷ್ಟಿ ನೀಡುವಂತೆ ನವಜೋತ್ ಸಿಂಗ್ ಸಿದ್ದು ಅವರ ಟ್ವೀಟ್ ಇದೆ.
ಕನ್ನಡಿಗರ ಆಕ್ರೋಶಕ್ಕೆ ಮಣಿದ ಕೇಂದ್ರ ಸರ್ಕಾರ, ಬ್ಯಾಂಕಿಂಗ್ ಹುದ್ದೆ ನೇಮಕಾತಿಗೆ ತಡೆ
ಪಂಜಾಬ್ ಅಭಿವೃದ್ಧಿಗಾಗಿ ನಾನು ಮಾಡುತ್ತಿರುವ ಕೆಲಸವನ್ನು ಪ್ರತಿಪಕ್ಷ ಆಮ್ ಆದ್ಮಿ ಪಕ್ಷ ಗುರುತಿಸಿದೆ. ರೈತರ ಸಮಸ್ಯೆ, ಭ್ರಷ್ಟಾಚಾರ, ಮಾದಕವಸ್ತು, ವಿದ್ಯುತ್ ಸಮಸ್ಯೆ ಸೇರಿದಂತೆ ನಾನು ಯಾವಾಗಲೂ ಪಂಜಾಬ್ ಜನರ ಪರ ಧ್ವನಿ ಎತ್ತಿದ್ದೇನೆ ಎಂದು ನವಜೋತ್ ಸಿಂಗ್ ಸಿದ್ದು ತಮ್ಮ ಟ್ವೀಟ್ ನಲ್ಲಿ ತಿಳಿಸಿದ್ದಾರೆ.