ಬಹುಜನ ಸಮಾಜ ಪಾರ್ಟಿ ಪಕ್ಷದ ಮುಖ್ಯಸ್ಥೆ ಮಾಯಾಮಾತಿ ಹಾಗೂ ಪಕ್ಷದ ಸಂಸದ ಸತೀಶ್ ಚಂದ್ರ ಮಿಶ್ರಾ ಉತ್ತರ ಪ್ರದೇಶದ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ಘೋಷಣೆ ಮಾಡಿದ್ದಾರೆ.
ಈ ವಿಚಾರವಾಗಿ ಮಾಧ್ಯಮಗಳ ಜೊತೆ ಮಾತನಾಡಿದ ಸಂಸದ ಸತೀಶ್ ಚಂದ್ರ ಮಿಶ್ರಾ, ಪಂಚ ರಾಜ್ಯ ಚುನಾವಣೆಯಲ್ಲಿ ಪಕ್ಷದ ಗೆಲುವಿಗಾಗಿ ಶ್ರಮ ವಹಿಸಲಿದ್ದೇವೆ. ಪಕ್ಷದ ಪ್ರಚಾರ ಹಾಗೂ ಚುನಾವಣಾ ತಂತ್ರಗಳ ಮೇಲೆ ಗಮನ ಹರಿಸೋದಾಗಿ ಹೇಳಿದರು.
ಅಲ್ಲದೇ ಮುಂದಿನ ವಿಧಾನಸಭಾ ಚುನಾವಣೆಯ ಬಳಿಕ ಉತ್ತರ ಪ್ರದೇಶದಲ್ಲಿ ಬಿಎಸ್ಪಿ ಸರ್ಕಾರವನ್ನು ರಚಿಸಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಮಾಜಿ ಸಿಎಂ ಮಾಯಾವತಿ ಹಾಗೂ ನಾನು ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ. ಸಮಾಜವಾದಿ ಪಕ್ಷದಲ್ಲಿ 400 ಅಭ್ಯರ್ಥಿಗಳು ಇಲ್ಲ ಅಂದಾದಲ್ಲಿ ಅವರು 400 ಕ್ಷೇತ್ರಗಳನ್ನು ಗೆಲ್ಲಲು ಹೇಗೆ ಸಾಧ್ಯ..? ಎಸ್ಪಿ ಹಾಗೂ ಬಿಜೆಪಿ ಈ ಬಾರಿ ಅಧಿಕಾರಕ್ಕೆ ಬರೋದಿಲ್ಲ. ಬಿಎಸ್ಪಿ ಉತ್ತರ ಪ್ರದೇಶದಲ್ಲಿ ಸರ್ಕಾರ ರಚನೆ ಮಾಡಲಿದೆ ಎಂದು ಹೇಳಿದ್ದಾರೆ.