alex Certify ವಿಧಾನಸಭಾ ಚುನಾವಣೆ ಸಮೀಪದಲ್ಲಿರುವ ಸಂದರ್ಭದಲ್ಲೇ BSY ಆಪ್ತರಿಗೆ ‘ಶಾಕ್’ ಸಾಧ್ಯತೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ವಿಧಾನಸಭಾ ಚುನಾವಣೆ ಸಮೀಪದಲ್ಲಿರುವ ಸಂದರ್ಭದಲ್ಲೇ BSY ಆಪ್ತರಿಗೆ ‘ಶಾಕ್’ ಸಾಧ್ಯತೆ

ಯಡಿಯೂರಪ್ಪನವರು ಮುಖ್ಯಮಂತ್ರಿಗಳಾಗಿದ್ದ ಸಂದರ್ಭದಲ್ಲಿ ತಮ್ಮ ಆಪ್ತರಿಗೆ ನಿಗಮ – ಮಂಡಳಿಗಳಲ್ಲಿ ಅವಕಾಶ ಕಲ್ಪಿಸಿ ಕೊಟ್ಟಿದ್ದರು. ಇದೀಗ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೊಸ ಪಟ್ಟಿ ಬಿಡುಗಡೆ ಮಾಡಲಿದ್ದು, ಪ್ರಸ್ತುತ ನಿಗಮ – ಮಂಡಳಿಗಳಲ್ಲಿ ಅಧಿಕಾರ ಅನುಭವಿಸುತ್ತಿರುವ ಯಡಿಯೂರಪ್ಪ ಆಪ್ತರಿಗೆ ಶಾಕ್ ಕಾದಿದೆ ಎಂದು ಹೇಳಲಾಗಿದೆ.

ನೂತನ ನಿಗಮ – ಮಂಡಳಿಗಳ ಅಧ್ಯಕ್ಷರ ಪಟ್ಟಿ ಇಂದು ಹೊರಬೀಳುವ ಸಾಧ್ಯತೆ ಇದೆ ಎಂದು ಹೇಳಲಾಗಿದ್ದು, ಸಂಘ ಪರಿವಾರದವರಿಗೆ ಹಾಗೂ ಪಕ್ಷ ನಿಷ್ಠರಿಗೆ ಹೆಚ್ಚಿನ ಆದ್ಯತೆ ನೀಡಲಾಗಿದೆ ಎಂಬ ಮಾತುಗಳು ಕೇಳಿ ಬರುತ್ತಿವೆ. ಆದರೆ ನಿಗಮ – ಮಂಡಳಿಗಳ ಅಧ್ಯಕ್ಷರಾಗಿರುವ ಶಾಸಕರನ್ನು ಬದಲಾಯಿಸುವ ಸಾಧ್ಯತೆ ಇಲ್ಲ ಎಂದು ಮೂಲಗಳು ಹೇಳಿವೆ.

ಯಡಿಯೂರಪ್ಪನವರು ಮುಖ್ಯಮಂತ್ರಿಗಳಾದ ಸಂದರ್ಭದಲ್ಲಿ ಪಕ್ಷದ ನಿಷ್ಠಾವಂತರನ್ನು ಕಡೆಗಣಿಸಿ ತಮ್ಮ ಆಪ್ತರನ್ನೇ ನಿಗಮ – ಮಂಡಳಿಗಳ ಅಧ್ಯಕ್ಷರನ್ನಾಗಿ ಮಾಡಿದ್ದರು ಎಂಬ ಆರೋಪ ಸ್ವಪಕ್ಷದ ಶಾಸಕರಿಂದಲೇ ಕೇಳಿ ಬಂದಿತ್ತು. ಹೀಗಾಗಿ ಇದನ್ನು ಸರಿಪಡಿಸಲು ಮುಂದಾಗಿರುವ ಬಿಜೆಪಿ ನಾಯಕರು, ಚುನಾವಣೆ ಸಮೀಪವಿರುವ ಸಂದರ್ಭದಲ್ಲಿ ಪಕ್ಷ ನಿಷ್ಠರಿಗೆ ಹಾಗೂ ಸಂಘ ಪರಿವಾರದವರಿಗೆ ಮನ್ನಣೆ ನೀಡಲು ಮುಂದಾಗಿದ್ದಾರೆ ಎಂದು ತಿಳಿದುಬಂದಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...