ದೇಶದ ಚುಕ್ಕಾಣಿ ಹಿಡಿಯುವವರು ಯಾರು ಎಂಬುದನ್ನು ನಿರ್ಧರಿಸುವ ರಾಜ್ಯಗಳ ಪಟ್ಟಿಯಲ್ಲಿ ಪ್ರಮುಖ ಸ್ಥಾನದಲ್ಲಿರುವ ಉತ್ತರ ಪ್ರದೇಶದಲ್ಲಿ ವಿಧಾನಸಭಾ ಚುನಾವಣೆ ಘೋಷಣೆಯಾಗಿದೆ. ಮುಂದಿನ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಗೆಲುವು ಸಾಧಿಸಿ ಕೇಂದ್ರದಲ್ಲಿ ಅಧಿಕಾರ ಹಿಡಿಯಬೇಕೆಂದರೆ ವಿಧಾನಸಭಾ ಚುನಾವಣೆಯಲ್ಲಿ ಗೆಲುವು ಸಾಧಿಸಲೇಬೇಕೆಂದು ಅರಿತು ಯೋಗಿ ಸರ್ಕಾರ ಭರ್ಜರಿ ತಯಾರಿ ನಡೆಸುತ್ತಿದೆ.
ಇದರ ಮಧ್ಯೆ ಇಂದು ಯೋಗಿ ಆದಿತ್ಯನಾಥ್ ಸಂಪುಟದ ಸಚಿವರೊಬ್ಬರು ರಾಜೀನಾಮೆ ನೀಡುವ ಮೂಲಕ ದೊಡ್ಡ ಶಾಕ್ ನೀಡಿದ್ದಾರೆ. Padrauna ಕ್ಷೇತ್ರವನ್ನು ಪ್ರತಿನಿಧಿಸುತ್ತಿರುವ ಸಚಿವ ಸ್ವಾಮಿ ಪ್ರಸಾದ್ ಮೌರ್ಯ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ಬಹುತೇಕ ಅವರು ಮುಲಾಯಂ ಸಿಂಗ್ ಯಾದವ್ ಅವರ ಸಮಾಜವಾದಿ ಪಕ್ಷವನ್ನು ಸೇರ್ಪಡೆಗೊಂಡು ವಿಧಾನಸಭಾ ಚುನಾವಣೆಯಲ್ಲಿ ಕಣಕ್ಕಿಳಿಯಲಿದ್ದಾರೆನ್ನಲಾಗಿದೆ.
ಈ ಹಿಂದೆ ಬಹುಜನ ಸಮಾಜ ಪಕ್ಷದಲ್ಲಿದ್ದ ಸ್ವಾಮಿ ಪ್ರಸಾದ್ ಮೌರ್ಯ 2016 ರಲ್ಲಿ ಪಕ್ಷ ತೊರೆದು ಬಿಜೆಪಿ ಸೇರ್ಪಡೆಗೊಂಡಿದ್ದರು. ಚುನಾವಣೆಯಲ್ಲಿ ಗೆದ್ದ ಅವರನ್ನು ಸಚಿವರನ್ನಾಗಿ ಮಾಡಿದ್ದು, ಇದೀಗ ವಿಧಾನಸಭಾ ಚುನಾವಣೆ ಹೊಸ್ತಿಲಲ್ಲೇ ಬಿಜೆಪಿ ತೊರೆಯಲು ಮುಂದಾಗುವ ಮೂಲಕ ಯೋಗಿ ಆದಿತ್ಯನಾಥ್ ಸರ್ಕಾರಕ್ಕೆ ದೊಡ್ಡ ಶಾಕ್ ನೀಡಿದ್ದಾರೆ.