
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಫ್ಲೆಕ್ಸ್ ಹಾವಳಿ ನಿಯಂತ್ರಣಕ್ಕೆ ಹೈಕೋರ್ಟ್ ಕಟ್ಟುನಿಟ್ಟಿನ ಸೂಚನೆ ನೀಡಿದೆ. ಆದರೂ ಕೂಡ ಬಿಬಿಎಂಪಿ ಈ ಕುರಿತು ದಿವ್ಯ ನಿರ್ಲಕ್ಷ್ಯ ವಹಿಸಿದ್ದು, ಎಲ್ಲೆಂದರಲ್ಲಿ ಫ್ಲೆಕ್ಸ್ ಗಳು ರಾರಾಜಿಸುತ್ತಿವೆ. ಅದರಲ್ಲೂ ರಾಜಕೀಯ ಗಣ್ಯ ವ್ಯಕ್ತಿಗಳ ಆಗಮನದ ವೇಳೆ ಹಾಗೂ ಅವರುಗಳ ಹುಟ್ಟು ಹಬ್ಬದ ಸಂದರ್ಭದಲ್ಲಿ ಇದರ ಹಾವಳಿ ಅತಿ ಹೆಚ್ಚು.
ಇತ್ತೀಚೆಗಷ್ಟೇ ಸಚಿವ ವಿ. ಸೋಮಣ್ಣನವರ ಹುಟ್ಟುಹಬ್ಬಕ್ಕೆ ಶುಭಕೋರುವ ನೆಪದಲ್ಲಿ ಬೆಂಗಳೂರು ನಗರದಾದ್ಯಂತ ಫ್ಲೆಕ್ಸ್ ಅಳವಡಿಸುವ ವೇಳೆ ಕೆ.ಆರ್.ಎಸ್. ಪಕ್ಷದ ಕಾರ್ಯಕರ್ತರು ಇದರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದರು. ಈ ವೇಳೆ ಸೋಮಣ್ಣ ಅವರ ಅಭಿಮಾನಿಗಳು ಕೆ.ಆರ್.ಎಸ್. ಪಕ್ಷದ ಕಾರ್ಯಕರ್ತರ ಮೇಲೆ ಹಲ್ಲೆ ನಡೆಸಿದ್ದು, ಈ ಕುರಿತು ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಇದರ ಮಧ್ಯೆ ಮತ್ತೊಂದು ಘಟನೆ ನಡೆದಿದ್ದು, ಬಿಜೆಪಿ ರಾಷ್ಟ್ರೀಯ ಕಾರ್ಯದರ್ಶಿ ಸಿ.ಟಿ. ರವಿ ಅವರ ಹುಟ್ಟುಹಬ್ಬಕ್ಕೆ ಶುಭ ಕೋರಿ ವಿಧಾನಸೌಧದ ಮುಂಭಾಗದಲ್ಲಿ ಅಳವಡಿಸಲಾಗಿದ್ದ ಫ್ಲೆಕ್ಸನ್ನು ಕಾಂಗ್ರೆಸ್ ನಾಯಕಿ ಬಿಂದು ಗೌಡ ಹರಿದು ಹಾಕಿದ್ದಾರೆ. ಇದರ ವಿಡಿಯೋ ಈಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.