ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಬಹುಮತ ಪಡೆದಿರುವ ಕಾಂಗ್ರೆಸ್, ಈಗಾಗಲೇ ಅಧಿಕಾರಕ್ಕೇರಿದೆ. ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಹಾಗೂ ಎಂಟು ಸಚಿವರು ಪ್ರಮಾಣವಚನ ಸ್ವೀಕರಿಸಿದ್ದಾರೆ.
ಇದರ ಮಧ್ಯೆ ಕೆಲ ಕಾಂಗ್ರೆಸ್ ಕಾರ್ಯಕರ್ತರು, ಕಾಂಗ್ರೆಸ್ ಅಧಿಕಾರಕ್ಕೆ ಬಂದ ಖುಷಿಯಲ್ಲಿ ಹಾಗೂ ಬಿಜೆಪಿ ದುರಾಡಳಿತವನ್ನು ಕೊನೆಗೊಳಿಸುತ್ತೇವೆಂದು ವಿಧಾನಸೌಧದ ಮುಂಭಾಗ ಗೋಮೂತ್ರ ಸಿಂಪಡಿಸಿದ್ದರು. ಇದಕ್ಕೆ ಹಲವರು ವಿರೋಧ ವ್ಯಕ್ತಪಡಿಸಿದ್ದು, ಈ ಕುರಿತಂತೆ ಕಾಂಗ್ರೆಸ್ ಈಗ ಸ್ಪಷ್ಟನೆ ನೀಡಿದೆ.
ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದು, ‘ಬಿಜೆಪಿಯ 40% ಸರ್ಕಾರದಿಂದ ವ್ಯಾಪಾರ ಸೌಧವಾಗಿದ್ದ ವಿಧಾನಸೌಧದಲ್ಲಿ ಪುನಃ ಪ್ರಜಾಪ್ರಭುತ್ವದ ಗೌರವವನ್ನು ಮರುಸ್ಥಾಪಿಸುತ್ತೇವೆ.
ಈ ನಿಟ್ಟಿನಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿಯೇ ಪರಿಪಾಲಿಸುವ ಧೋರಣೆಯನ್ನು ಖಂಡಿಸುವ ಸಲುವಾಗಿ ವಿಡಂಬನಾತ್ಮಕವಾಗಿ ಗೋಮೂತ್ರ ಸಿಂಪಡಿಸಿದ್ದಾರೆ.
ಕಾಂಗ್ರೆಸ್ ಧರ್ಮ ನಿರಪೇಕ್ಷತೆ ಹೊಂದಿದ್ದು, ಎಂದಿಗೂ ಮೌಡ್ಯಾಚರಣೆಗಳನ್ನು ಬೆಂಬಲಿಸುವುದಿಲ್ಲ.’ಎಂದು ಕಾಂಗ್ರೆಸ್ ಹೇಳಿದೆ.