ಬೆಂಗಳೂರು : ಕಾಂಗ್ರೆಸ್ ನ ಹಿರಿಯ ನಾಯಕ ಎಸ್. ಆರ್. ಪಾಟೀಲ್ ಅವರ ಸ್ಥಾನವು ರಾಜ್ಯ ಸಭೆಯ ಸದಸ್ಯ ಹಾಗೂ ಎಐಸಿಸಿ ಪ್ರಧಾನ ಕಾರ್ಯದರ್ಶಿ ಬಿ.ಕೆ. ಹರಿಪ್ರಸಾದ್ ಅವರಿಗೆ ಒಲಿದು ಬಂದಿದೆ.
ಬಿ.ಕೆ. ಹರಿಪ್ರಸಾದ್ ಅವರು ಇಂದು ವಿಧಾನ ಪರಿಷತ್ ವಿಪಕ್ಷ ನಾಯಕರಾಗಿ ಅಧಿಕಾರ ಸ್ವೀಕರಿಸಿದ್ದಾರೆ. ಕೆಪಿಸಿಸಿಯ ಕಾರ್ಯಾಧ್ಯಕ್ಷ ಸಲೀಂ ಅಹಮದ್ ಅವರು ಹರಿಪ್ರಸಾದ್ ಅವರಿಗೆ ಸರ್ಕಾರದ ಅಧಿಸೂಚನಾ ಪ್ರತಿ ವಿತರಿಸಿದ್ದಾರೆ.
ಕಾಂಗ್ರೆಸ್ ನ ಹಿರಿಯ ಸದಸ್ಯ ಬಿ.ಕೆ. ಹರಿಪ್ರಸಾದ್ ಇಂದಿನಿಂದ ಅಧಿಕಾರ ವಹಿಸಿಕೊಂಡಿದ್ದಾರೆ. ವಿಧಾನ ಸೌಧದ ಕಚೇರಿಯಲ್ಲಿ ಅವರು ಅಧಿಕಾರ ವಹಿಸಿಕೊಂಡಿದ್ದಾರೆ.
ಹರಿಪ್ರಸಾದ್ ಅವರು ಕುರ್ಚಿಗೆ ಕೈ ಮುಗಿದು, ಸಂವಿಧಾನ ಪ್ರತಿಗೆ ನಮಸ್ಕರಿಸಿದ್ದಾರೆ. ಆ ನಂತರ ತಮ್ಮ ಸ್ಥಾನದಲ್ಲಿ ಕುಳಿತುಕೊಂಡಿದ್ದಾರೆ. ಇನ್ನೊಂದೆಡೆ ಕಾಂಗ್ರೆಸ್ ನ ಚುನಾವಣಾ ಪ್ರಚಾರ ಸಮಿತಿ ಅಧ್ಯಕ್ಷರಾಗಿ ಈಗಾಗಲೇ ಹಿರಿಯ ನಾಯಕ ಎಂ.ಬಿ. ಪಾಟೀಲ್ ಅಧಿಕಾರ ವಹಿಸಿಕೊಂಡಿದ್ದಾರೆ.
ಈ ಮೂಲಕ ಕಾಂಗ್ರೆಸ್ ಮುಂಬರುವ ವಿಧಾನಸಭೆ ಚುನಾವಣೆಗೆ ಕಹಳೆ ಊದಿದಂತಾಗಿದೆ.