alex Certify ವಿಪಕ್ಷಗಳು ಕೃಷಿ ಮಸೂದೆ ವಿರುದ್ಧ ರೈತರ ದಾರಿ ತಪ್ಪಿಸುವ ಕೆಲಸ ಮಾಡುತ್ತಿವೆ; ಸಿಎಂ ಯಡಿಯೂರಪ್ಪ ಕಿಡಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ವಿಪಕ್ಷಗಳು ಕೃಷಿ ಮಸೂದೆ ವಿರುದ್ಧ ರೈತರ ದಾರಿ ತಪ್ಪಿಸುವ ಕೆಲಸ ಮಾಡುತ್ತಿವೆ; ಸಿಎಂ ಯಡಿಯೂರಪ್ಪ ಕಿಡಿ

ಬೆಂಗಳೂರು: ಕೇಂದ್ರ ಸರ್ಕಾರದ ಕೃಷಿ ನೀತಿ ವಿರೋಧಿಸಿ ರೈತರು ನಡೆಸುತ್ತಿರುವ ಪ್ರತಿಭಟನೆ ವಿಪಕ್ಷಗಳ ರಾಜಕೀಯ ದುರುದ್ದೇಶವಾಗಿದೆ ಎಂದು ಸಿಎಂ ಬಿ.ಎಸ್.ಯಡಿಯೂರಪ್ಪ ಕಿಡಿಕಾರಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಸಿಎಂ ಯಡಿಯೂರಪ್ಪ, ರಾಜಕೀಯ ಅಸ್ತಿತ್ವಕ್ಕಾಗಿ ಕೇಂದ್ರ ಸರ್ಕಾರದ ಕೃಷಿ ಸುಧಾರಣೆಗಳನ್ನು ವಿರೋಧಿಸುತ್ತಿರುವ ಪ್ರತಿಪಕ್ಷಗಳು ಹಿಂದೆ ಅದರ ಪರವಾಗಿದ್ದವು. ಈಗ ಮಸೂದೆ ವಿರುದ್ಧ ರೈತರನ್ನು ದಾರಿ ತಪ್ಪಿಸುವ ಕೆಲಸ ಮಾಡುತ್ತಿವೆ. ರೈತರಿಗೆ ಆಗುವ ಅನುಕೂಲತೆಗಳನ್ನು ತಪ್ಪಿಸಲು ನಡೆಸುತ್ತಿರುವ ವಿರೋಧವನ್ನು ಒಪ್ಪಲಾಗದು. ಇದರ ವಿರುದ್ಧ ಬಿಜೆಪಿ ಜನಜಾಗೃತಿ ನಡೆಸಲಿದೆ.

ಕೃಷಿ ಕ್ಷೇತ್ರದಲ್ಲಿ ಸುಧಾರಣೆ ತರಲು ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಕೃಷಿ ಮಸೂದೆಗಳನ್ನು ಜಾರಿಗೆ ತಂದಿದೆ. ಕೃಷಿ ಉತ್ಪನ್ನಗಳನ್ನು ಸರ್ಕಾರ ಖರೀದಿಸುವ ಪ್ರಕ್ರಿಯೆ, ಕನಿಷ್ಠ ಬೆಂಬಲ ಬೆಲೆ ವ್ಯವಸ್ಥೆ ಖಚಿತವಾಗಿ ಮುಂದುವರಿಯಲಿದೆ. ಜೊತೆಗೆ ರೈತರಿಗೆ ಹೆಚ್ಚಿನ ಅವಕಾಶ, ಆಯ್ಕೆ ಮತ್ತು ಆದಾಯ ಹೆಚ್ಚಿಸಲು ನೂತನ ಕಾಯ್ದೆ ನೆರವಾಗಲಿದೆ ಎಂದು ಹೇಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...