ಶಿವಮೊಗ್ಗ ವಿಮಾನ ನಿಲ್ದಾಣ ಉದ್ಘಾಟನಾ ಕಾರ್ಯಕ್ರಮಕ್ಕೆ ಆಗಮಿಸಿದ್ದ ಬಿಜೆಪಿ ಕಾರ್ಯಕರ್ತರೊಬ್ಬರು ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಸೋಮವಾರದಂದು ನಡೆದಿದೆ.
ಸೊರಬ ತಾಲೂಕಿನ ಚಿಮಣೂರು ಗ್ರಾಮದ 55 ವರ್ಷದ ಮಲ್ಲಿಕಾರ್ಜುನ ಮೃತಪಟ್ಟವರಾಗಿದ್ದು, ಇವರು ಸೋಮವಾರ ಬೆಳಿಗ್ಗೆ ತಮ್ಮ ಸಂಗಡಿಗರೊಂದಿಗೆ ಉದ್ಘಾಟನಾ ಕಾರ್ಯಕ್ರಮಕ್ಕೆ ಬಸ್ ನಲ್ಲಿ ಆಗಮಿಸಿದ್ದರು.
ಕಾರ್ಯಕ್ರಮ ಮುಗಿದ ಬಳಿಕ ನಡೆದುಕೊಂಡು ವಾಪಸ್ ಹೋಗುತ್ತಿದ್ದ ವೇಳೆ ತೀವ್ರವಾಗಿ ಅಸ್ವಸ್ಥಗೊಂಡ ಅವರು ಕುಸಿದು ಬಿದ್ದು ಮೃತಪಟ್ಟಿದ್ದಾರೆ. ತುಂಗಾ ನಗರ ಪೊಲೀಸ್ ಠಾಣೆಯಲ್ಲಿ ಈ ಕುರಿತಂತೆ ಪ್ರಕರಣ ದಾಖಲಾಗಿದೆ.