ಬಳ್ಳಾರಿ : ಮೆಡಿಕಲ್ ಹಾಗೂ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಸ್ಫೋಟಗೊಳ್ಳುತ್ತಿರುವ ಮಹಾಮಾರಿ ಮತ್ತೆ ತನ್ನ ಆರ್ಭಟ ಮುಂದುವರೆಸಿದೆ. ಈಗ ಜಿಲ್ಲೆಯಲ್ಲಿನ ವಿಮ್ಸ್ ಕಾಲೇಜಿನಲ್ಲಿ ಸ್ಫೋಟವಾಗಿದೆ.
ವಿಮ್ಸ್ ವೈದ್ಯಕೀಯ ಕಾಲೇಜಿನ 21 ವಿದ್ಯಾರ್ಥಿಗಳಲ್ಲಿ ಕೊರೊನಾ ಸೋಂಕು ಕಾಣಿಸಿಕೊಂಡಿದ್ದು, ಆತಂಕ ಮನೆ ಮಾಡುತ್ತಿದೆ. ಈ ಕಾಲೇಜಿನಲ್ಲಿ 250 ವಿದ್ಯಾರ್ಥಿಗಳು ಓದುತ್ತಿದ್ದು, ಈ ಪೈಕಿ 21 ವಿದ್ಯಾರ್ಥಿಗಳಲ್ಲಿ ಸೋಂಕು ಕಾಣಿಸಿಕೊಂಡಿದೆ. ಹೀಗಾಗಿ ಇನ್ನುಳಿದ ವಿದ್ಯಾರ್ಥಿಗಳು, ವೈದ್ಯರು ಹಾಗೂ ಸಿಬ್ಬಂದಿಯಲ್ಲಿ ಆತಂಕ ಮನೆ ಮಾಡುತ್ತಿದೆ.
ಸೋಂಕಿತ ವ್ಯಕ್ತಿಗಳನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದ್ದು, ಇನ್ನುಳಿದ ವಿದ್ಯಾರ್ಥಿಗಳನ್ನು ಹಾಸ್ಟೆಲ್ ನಲ್ಲಿ ಕ್ವಾರಂಟೈನ್ ಮಾಡಲಾಗಿದೆ.
ಅಲ್ಲದೇ, ಇನ್ನುಳಿದ ವಿದ್ಯಾರ್ಥಿಗಳ ರ್ಯಾಂಡಮ್ ಟೆಸ್ಟ್ ಮಾಡಲು ವಿಮ್ಸ್ ನಿರ್ದೇಶಕ ಗಂಗಾಧರ ಗೌಡ ಅವರು ಸೂಚನೆ ನೀಡಿದ್ದಾರೆ.
ವಿದ್ಯಾರ್ಥಿಗಳಲ್ಲಿ ಸೋಂಕು ಕಾಣಿಸಿಕೊಳ್ಳುತ್ತಿದ್ದಂತೆ, ಆಸ್ಪತ್ರೆಯಲ್ಲಿನ ರೋಗಿಗಳು, ಆಸ್ಪತ್ಸೆಗೆ ಭೇಟಿ ನೀಡಿದವರು, ವಿದ್ಯಾರ್ಥಿಗಳ ಸಂಪರ್ಕಕ್ಕೆ ಬಂದವರು ಟೆಸ್ಟ್ ಮಾಡಿಸಿಕೊಳ್ಳುವಂತೆ ಹೇಳಲಾಗಿದೆ. ವೈದ್ಯಕೀಯ ವಿದ್ಯಾರ್ಥಿಗಳಲ್ಲಿ ಸೋಂಕು ಕಾಣಿಸಿಕೊಂಡಿದ್ದಕ್ಕೆ ಬಳ್ಳಾರಿ ಜಿಲ್ಲೆಯಲ್ಲಿ ಮತ್ತೆ ಸ್ಪೋಟಗೊಳ್ಳಬಹುದು ಎಂಬ ಆತಂಕ ಮನೆ ಮಾಡುತ್ತಿದೆ.