alex Certify ‘ವಿವಾದ’ ದ ಕಾರಣಕ್ಕೆ ಅಧಿಕಾರ ಕಳೆದುಕೊಂಡ ಶಿವಮೊಗ್ಗ ಜಿಲ್ಲೆಯ 4ನೇ ರಾಜಕಾರಣಿ ಕೆ.ಎಸ್. ಈಶ್ವರಪ್ಪ…! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

‘ವಿವಾದ’ ದ ಕಾರಣಕ್ಕೆ ಅಧಿಕಾರ ಕಳೆದುಕೊಂಡ ಶಿವಮೊಗ್ಗ ಜಿಲ್ಲೆಯ 4ನೇ ರಾಜಕಾರಣಿ ಕೆ.ಎಸ್. ಈಶ್ವರಪ್ಪ…!

ರಾಜ್ಯ ರಾಜಕಾರಣದಲ್ಲಿ ಶಿವಮೊಗ್ಗ ಜಿಲ್ಲೆಯದ್ದು ಬಹುದೊಡ್ಡ ಹೆಸರು. ರಾಜ್ಯಕ್ಕೆ ನಾಲ್ವರು ಮುಖ್ಯಮಂತ್ರಿಗಳನ್ನು ನೀಡಿರುವ ಹೆಗ್ಗಳಿಕೆಯೂ ಶಿವಮೊಗ್ಗ ಜಿಲ್ಲೆಗಿದೆ. ಆದರೆ ವಿವಾದದ ಕಾರಣಕ್ಕೆ ಅವಧಿಗೂ ಮುನ್ನ ಅಧಿಕಾರ ಕಳೆದುಕೊಂಡ ರಾಜಕಾರಣಿಗಳೂ ಶಿವಮೊಗ್ಗ ಜಿಲ್ಲೆಯಲ್ಲಿದ್ದಾರೆ.

ಕರ್ನಾಟಕ ಕಂಡ ವರ್ಣರಂಜಿತ ರಾಜಕಾರಣಿ ಎಸ್. ಬಂಗಾರಪ್ಪನವರು ಕ್ಲಾಸಿಕ್ ಕಂಪ್ಯೂಟರ್ ಹಗರಣದಲ್ಲಿ ಅವಧಿ ಪೂರ್ಣಗೊಳಿಸುವ ಮುನ್ನವೇ ತಮ್ಮ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಇನ್ನು ಯಡಿಯೂರಪ್ಪನವರು ಡಿನೋಟಿಫಿಕೇಶನ್ ಹಗರಣದಲ್ಲಿ ತಮ್ಮ ಮುಖ್ಯಮಂತ್ರಿ ಸ್ಥಾನ ತ್ಯಜಿಸಬೇಕಾಗಿ ಬಂದಿತ್ತು.

ಹಾಗೆಯೇ ಸಚಿವರಾಗಿದ್ದ ಹರತಾಳು ಹಾಲಪ್ಪ ತಮ್ಮ ಸ್ನೇಹಿತನ ಪತ್ನಿ ಮೇಲೆ ಅತ್ಯಾಚಾರ ಎಸಗಿದ ಆರೋಪದಲ್ಲಿ ರಾಜೀನಾಮೆ ನೀಡಬೇಕಾಗಿ ಬಂದಿತ್ತು. ಇದೀಗ ಬೆಳಗಾವಿ ಮೂಲದ ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣದಲ್ಲಿ ಈಶ್ವರಪ್ಪನವರು ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...