alex Certify ವಿಶ್ವದಾದ್ಯಂತ ಚಿತ್ರಮಂದಿರಗಳಲ್ಲಿ ಕೆಜಿಎಫ್ -2 ಅಬ್ಬರ; ಮುಗಿಲುಮುಟ್ಟಿದ ಯಶ್ ಅಭಿಮಾನಿಗಳ ಸಂಭ್ರಮ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ವಿಶ್ವದಾದ್ಯಂತ ಚಿತ್ರಮಂದಿರಗಳಲ್ಲಿ ಕೆಜಿಎಫ್ -2 ಅಬ್ಬರ; ಮುಗಿಲುಮುಟ್ಟಿದ ಯಶ್ ಅಭಿಮಾನಿಗಳ ಸಂಭ್ರಮ

‘ಕೆಜಿಎಫ್ ಚಾಪ್ಟರ್ 2’ ಸಿನಿಮಾ ಇಂದು ವಿಶ್ವದಾದ್ಯಂತ ಚಿತ್ರಮಂದಿರಗಳಲ್ಲಿ ತೆರೆಕಂಡಿದೆ. 8 ಸಾವಿರಕ್ಕೂ ಅಧಿಕ ಸ್ಕ್ರೀನ್ ಗಳಲ್ಲಿ ಈ ಚಿತ್ರ ತೆರೆಕಂಡಿದ್ದು, ಭಾರತದಲ್ಲಿಯೇ 6000 ಗೂ ಅಧಿಕ ಚಿತ್ರಮಂದಿರಗಳಲ್ಲಿ ಪ್ರದರ್ಶನ ಕಾಣುತ್ತಿದೆ.

ಐದು ಭಾಷೆಗಳಲ್ಲಿ ಈ ಚಿತ್ರ ನಿರ್ಮಾಣಗೊಂಡಿದ್ದು, ಎಪ್ಪತ್ತು ದೇಶಗಳಲ್ಲಿ ಇಂದು ತೆರೆಕಂಡಿದೆ. ಚಿತ್ರ ಬಿಡುಗಡೆಗೂ ಮುನ್ನವೇ ಟಿಕೆಟ್ ಮುಂಗಡ ಬುಕ್ಕಿಂಗ್ ಆರಂಭಗೊಂಡಿದ್ದು, ತೆರೆ ಮೇಲೆ ತಮ್ಮ ನೆಚ್ಚಿನ ನಟನನ್ನು ಕಂಡು ಅಭಿಮಾನಿಗಳ ಸಂಭ್ರಮ ಮುಗಿಲು ಮುಟ್ಟಿದೆ.

ಪ್ರಶಾಂತ್ ನೀಲ್ ನಿರ್ದೇಶನದ ಈ ಚಿತ್ರದಲ್ಲಿ ರಾಕಿಂಗ್ ಸ್ಟಾರ್ ಯಶ್, ಸಂಜಯ್ ದತ್, ರವೀನಾ ಟಂಡನ್ ಮೊದಲಾದವರು ನಟಿಸಿದ್ದಾರೆ. ವಿಜಯ್ ಕಿರಂಗದೂರು ತಮ್ಮ ಹೊಂಬಾಳೆ ಫಿಲ್ಮ್ಸ್ ಬ್ಯಾನರ್ ನಡಿ ಈ ಚಿತ್ರ ನಿರ್ಮಾಣ ಮಾಡಿದ್ದಾರೆ.

ಈ ಚಿತ್ರ ರಾಜಮೌಳಿ ನಿರ್ದೇಶನದ RRR ಚಿತ್ರವನ್ನೂ ಮೀರಿಸಲಿದೆ ಎಂಬ ಮಾತುಗಳು ಚಿತ್ರರಂಗದ ವಲಯದಲ್ಲಿ ಕೇಳಿಬರುತ್ತಿದ್ದು, ಕನ್ನಡ ಚಿತ್ರವೊಂದು ಈಗ ವಿಶ್ವದಾದ್ಯಂತ ಸದ್ದು ಮಾಡುತ್ತಿರುವುದು ಕನ್ನಡಿಗರಿಗೆ ಹೆಮ್ಮೆ ತಂದಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...