alex Certify ವಿಶ್ವವಿದ್ಯಾಲಯದ ಕ್ಯಾಂಪಸ್ ನಲ್ಲಿಯೇ ಪ್ರಾಧ್ಯಾಪಕ ಪತಿಯನ್ನು ಮನಬಂದಂತೆ ಥಳಿಸಿದ ಪತ್ನಿ; ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ವೈರಲ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ವಿಶ್ವವಿದ್ಯಾಲಯದ ಕ್ಯಾಂಪಸ್ ನಲ್ಲಿಯೇ ಪ್ರಾಧ್ಯಾಪಕ ಪತಿಯನ್ನು ಮನಬಂದಂತೆ ಥಳಿಸಿದ ಪತ್ನಿ; ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ವೈರಲ್

ಒಡಿಸ್ಸಾದ ಬೆಹರ್ರಾಂಪುರ್ ವಿಶ್ವವಿದ್ಯಾಲಯದಲ್ಲಿ ಸಹಾಯಕ ಪ್ರಾಧ್ಯಾಪಕರಾಗಿ ಕೆಲಸ ಮಾಡುತ್ತಿದ್ದ ತನ್ನ ಪತಿಯನ್ನು ಮಹಿಳೆಯೊಬ್ಬರು ಚಪ್ಪಲಿಯಿಂದ ಮನಬಂದಂತೆ ಥಳಿಸಿರುವ ಘಟನೆ ನಡೆದಿದ್ದು, ಈ ವಿಡಿಯೋ ಈಗ ಸಾಮಾಜಿಕ ಜಾಲತಾಣಗಳಲ್ಲಿ ಫುಲ್ ವೈರಲ್ ಆಗಿದೆ.

ಶನಿವಾರ ಬೆಳಗ್ಗೆ 11-30 ರ ಸುಮಾರಿಗೆ ಈ ಘಟನೆ ನಡೆದಿದ್ದು, ವಿಶ್ವವಿದ್ಯಾಲಯದ ಆವರಣದಲ್ಲೇ ಇರುವ ಇಂಗ್ಲಿಷ್ ವಿಭಾಗದಲ್ಲಿ ಸಹಾಯಕ ಪ್ರಾಧ್ಯಾಪಕರಾಗಿ ಕೆಲಸ ಮಾಡುತ್ತಿದ್ದ ಅನಿಲ್ ಕುಮಾರ್ ತಿರಿಯಾ ಅವರ ಕೊಠಡಿಗೆ ಪತ್ನಿ ತೆರಳಿದ್ದಾರೆ.

ಬಳಿಕ ರೂಮಿನ ಬೋಲ್ಟ್ ಹಾಕಿ ತಮ್ಮ ಕಾಲಿನಲ್ಲಿರುವ ಚಪ್ಪಲಿ ತೆಗೆದು ಮನಬಂದಂತೆ ಥಳಿಸಲು ಆರಂಭಿಸಿದ್ದಾರೆ. ಅಲ್ಲದೆ ನೀನು ಮಹಾನ್ ಘನ ಕಾರ್ಯ ಮಾಡುತ್ತಿದ್ದೀಯಾ ಎಂದು ಪತಿಯನ್ನು ಆಕೆ ಪ್ರಶ್ನಿಸಿದ್ದಾರೆ. ಇವರಿಬ್ಬರ ಕಿರುಚಾಟ ಕೇಳಿ ವಿಶ್ವವಿದ್ಯಾಲಯದ ಇತರ ಸಿಬ್ಬಂದಿ ಓಡಿ ಬಂದಿದ್ದಾರೆ.

ಈ ವೇಳೆ ಸಿಬ್ಬಂದಿ ಬಾಗಿಲು ತೆರೆಯುವಂತೆ ಹೇಳಿದರೂ ಸಹ ಇದಕ್ಕೆ ಆಕೆ ಒಪ್ಪಿಲ್ಲ. ಕಡೆಗೆ ಭದ್ರತಾ ಸಿಬ್ಬಂದಿಯನ್ನು ಕರೆಸಿದಾಗ ತೆಗೆದಿದ್ದಾಳೆ. ಅಷ್ಟರಲ್ಲಾಗಲೇ ಪತ್ನಿಯ ಹೊಡೆತದಿಂದ ಹಣ್ಣುಗಾಯಿ ನೀರುಗಾಯಿ ಆಗಿದ್ದ ಅನಿಲ್ ಸುಧಾರಿಸಿಕೊಂಡಿದ್ದಾರೆ. ಈ ಎಲ್ಲ ವಿದ್ಯಮಾನಗಳ ವಿಡಿಯೋ ಈಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...