alex Certify ವಿಶ್ವ ಚಿತ್ರರಂಗದ ಇತಿಹಾಸದಲ್ಲೇ ಅತಿ ಹೆಚ್ಚು ವೆಚ್ಚದಲ್ಲಿ ನಿರ್ಮಾಣಗೊಂಡಿದೆ ಈ ಸಿನಿಮಾ; ಡಿ.16ರಂದು ವಿಶ್ವದಾದ್ಯಂತ ಬಿಡುಗಡೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ವಿಶ್ವ ಚಿತ್ರರಂಗದ ಇತಿಹಾಸದಲ್ಲೇ ಅತಿ ಹೆಚ್ಚು ವೆಚ್ಚದಲ್ಲಿ ನಿರ್ಮಾಣಗೊಂಡಿದೆ ಈ ಸಿನಿಮಾ; ಡಿ.16ರಂದು ವಿಶ್ವದಾದ್ಯಂತ ಬಿಡುಗಡೆ

ವಿಶ್ವ ಚಿತ್ರರಂಗದ ಇತಿಹಾಸದಲ್ಲೇ ಅತಿ ಹೆಚ್ಚು ವೆಚ್ಚದಲ್ಲಿ ನಿರ್ಮಾಣಗೊಂಡಿದೆ ಎಂದು ಹೇಳಲಾಗಿರುವ ‘ಅವತಾರ್ – ದ ವೇ ಆಫ್ ವಾಟರ್’ ಸಿನಿಮಾ ಡಿಸೆಂಬರ್ 16ರಂದು ವಿಶ್ವದಾದ್ಯಂತ ತೆರೆ ಕಾಣಲಿದೆ. ಹಾಲಿವುಡ್ ನ ಈ ಸಿನಿಮಾ ಬರೋಬ್ಬರಿ 3,351 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಾಣವಾಗಿದೆ ಎಂದು ಚಿತ್ರರಂಗದ ಪರಿಣಿತರು ಅಭಿಪ್ರಾಯಪಟ್ಟಿದ್ದಾರೆ.

ಭಾರತವೂ ಸೇರಿದಂತೆ ವಿಶ್ವದ 3000ಕ್ಕೂ ಅಧಿಕ ಪರದೆಗಳಲ್ಲಿ ಈ ಚಿತ್ರ ತೆರೆ ಕಾಣಲಿದ್ದು, ಕನ್ನಡದಲ್ಲಿಯೂ ಇದನ್ನು ವೀಕ್ಷಿಸಲು ಸಾಧ್ಯವಾಗಲಿದೆ. ಈ ಚಿತ್ರ ಈಗಾಗಲೇ ಬಿಡುಗಡೆಗೊಂಡು ಗಲ್ಲಾ ಪೆಟ್ಟಿಗೆಯಲ್ಲಿ ಭಾರಿ ಗಳಿಕೆ ಮಾಡಿದ್ದ ‘ಅವತಾರ್’ ನ ಮುಂದುವರೆದ ಸರಣಿಯಾಗಿದೆ.

ಭಾರತದಲ್ಲಿ ಈ ಚಿತ್ರವನ್ನು ಟ್ವೆಂಟಿಯತ್ ಸೆಂಚುರಿ ಸ್ಟುಡಿಯೋಸ್ ಹಂಚಿಕೆ ಮಾಡುತ್ತಿದ್ದು, ಈಗಾಗಲೇ ಟಿಕೆಟ್ ಗಳ ಮುಂಗಡ ಬುಕ್ಕಿಂಗ್ ನಿಂದ ಎಂಟು ಕೋಟಿ ರೂಪಾಯಿಗಳಿಗೂ ಅಧಿಕ ಮೊತ್ತ ಸಂಗ್ರಹಿಸಿದೆ. ಚಿತ್ರದ 2.4 ಲಕ್ಷ ಟಿಕೆಟ್ ಗಳು ಮಾರಾಟವಾಗಿವೆ ಎಂದು ಮೂಲಗಳು ತಿಳಿಸಿವೆ. ಇಷ್ಟೊಂದು ವೆಚ್ಚದಲ್ಲಿ ನಿರ್ಮಾಣವಾಗಿರುವ ಈ ಚಿತ್ರ ಎಷ್ಟು ಗಳಿಕೆ ಮಾಡಬಹುದು ಎಂಬ ಕುತೂಹಲ ಈಗ ಎಲ್ಲರಲ್ಲೂ ಮನೆ ಮಾಡಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...