alex Certify ವಿಶ್ವ ಶ್ರೀಮಂತರ ಪಟ್ಟಿಯಲ್ಲಿ 15ನೇ ಸ್ಥಾನಕ್ಕೆ ಕುಸಿದ ಗೌತಮ್ ಅದಾನಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ವಿಶ್ವ ಶ್ರೀಮಂತರ ಪಟ್ಟಿಯಲ್ಲಿ 15ನೇ ಸ್ಥಾನಕ್ಕೆ ಕುಸಿದ ಗೌತಮ್ ಅದಾನಿ

ಅಮೆರಿಕಾ ಮೂಲದ ಸಂಶೋಧನಾ ಸಂಸ್ಥೆ ಹಿಂಡನ್ ಬರ್ಗ್ ತನಿಖಾ ವರದಿ ಬಳಿಕ ಅದಾನಿ ಸಮೂಹ ತೀವ್ರ ಸಂಕಷ್ಟಕ್ಕೆ ಸಿಲುಕಿದೆ. ಕಂಪನಿ ಷೇರುಗಳ ಬೆಲೆಯಲ್ಲಿ ಕುಸಿತ ಕಾಣುತ್ತಿದ್ದು, ಇದರ ಪರಿಣಾಮ ವಿಶ್ವ ಶ್ರೀಮಂತರ ಪಟ್ಟಿಯಲ್ಲಿ 3 ನೇ ಸ್ಥಾನದಲ್ಲಿದ್ದ ಗೌತಮ್ ಅದಾನಿ ಈಗ 15 ನೇ ಸ್ಥಾನಕ್ಕೆ ಜಾರಿದ್ದಾರೆ.

ಅದಾನಿ ಸಮೂಹಕ್ಕೆ ಮತ್ತೊಂದು ಆಘಾತ ಎದುರಾಗಿದ್ದು, ಸಾಲ ನೀಡಲು ಖಾಸಗಿ ಬ್ಯಾಂಕುಗಳು ನಿರಾಕರಿಸುತ್ತಿವೆ ಎನ್ನಲಾಗಿದೆ. ಅಡಮಾನಕ್ಕಾಗಿ ಅದಾನಿ ಕಂಪನಿ ನೀಡಲು ಮುಂದಾದ ಬಾಂಡುಗಳನ್ನು ಸ್ವೀಕರಿಸಲು ಈ ಬ್ಯಾಂಕುಗಳು ಹಿಂದೇಟು ಹಾಕುತ್ತಿವೆ. ಹೀಗಾಗಿ ಷೇರುಗಳ ಮೌಲ್ಯ ಮತ್ತಷ್ಟು ಪಾತಾಳಕ್ಕೆ ಕುಸಿಯುತ್ತಿದೆ.

ಇದರ ಮಧ್ಯೆ ಈ ಮೊದಲು ಭಾರತದ ಹಾಗೂ ಏಷ್ಯಾದ ಅತಿ ಸಿರಿವಂತ ವ್ಯಕ್ತಿ ಎಂಬ ಹೆಗ್ಗಳಿಕೆ ಹೊಂದಿದ್ದ ರಿಲಯನ್ಸ್ ಇಂಡಸ್ಟ್ರೀಸ್ ಮುಖ್ಯಸ್ಥ ಮುಖೇಶ್ ಅಂಬಾನಿ, ಗೌತಮ್ ಅದಾನಿ ಸಂಪತ್ತಿನಲ್ಲಿ ಇಳಿಕೆಯಾದ ಕಾರಣ ಮತ್ತೆ ಆ ಸ್ಥಾನಕ್ಕೆ ಮರಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...