ಷೇರು ಮಾರುಕಟ್ಟೆಯ ಏರಿಳಿತಕ್ಕೆ ಅನುಗುಣವಾಗಿ ವಿಶ್ವ ಶ್ರೀಮಂತರ ಪಟ್ಟಿಯಲ್ಲಿ ಆಗಾಗ ಬದಲಾವಣೆಗಳಾಗುತ್ತಿರುತ್ತದೆ. ಹೀಗಾಗಿ ಭಾರತದ ಅತಿ ಸಿರಿವಂತ ವ್ಯಕ್ತಿಯಾಗಿರುವ ಗೌತಮ್ ಅದಾನಿ ವಿಶ್ವ ಸಿರಿವಂತರ ಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿದ್ದರು.
ಆ ಬಳಿಕ ಷೇರು ಮಾರುಕಟ್ಟೆಯಲ್ಲಿನ ಬೆಳವಣಿಗೆಗಳಿಂದಾಗಿ ಗೌತಮ್ ಅದಾನಿ ನಾಲ್ಕನೇ ಸ್ಥಾನಕ್ಕೆ ತಲುಪಿದ್ದು, ಜೆಫ್ ಬೆಜೋಸ್ ಮೂರನೇ ಸ್ಥಾನದಲ್ಲಿದ್ದರು. ಇದೀಗ ಗೌತಮ ಅದಾನಿ, ಜೆಫ್ ಬೆಜೋಸ್ ಅವರನ್ನು ಹಿಂದಿಕ್ಕಿ ಮತ್ತೆ ಮೂರನೇ ಸ್ಥಾನಕ್ಕೆ ಬಂದಿದ್ದಾರೆ.
ಕಳೆದ ಕೆಲವು ದಿನಗಳಿಂದ ಭಾರತೀಯ ಷೇರು ಮಾರುಕಟ್ಟೆಯಲ್ಲಿ ಗಳಿಕೆಯ ಓಟ ಮುಂದುವರೆದಿದ್ದು ಇದರಿಂದಾಗಿ ಗೌತಮ್ ಅದಾನಿ ಅವರ ಸಂಪತ್ತು ಹೆಚ್ಚಳವಾಗಿದೆ. ಅವರ ಒಟ್ಟು ಸಂಪತ್ತು 131.9 ಶತಕೋಟಿ ಡಾಲರ್ ಆಗಿದೆ ಎಂದು ಫೋರ್ಬ್ಸ್ ತಿಳಿಸಿದೆ.