ಕುಖ್ಯಾತ ದಂತ ಚೋರ ವೀರಪ್ಪನ್ ಸಹಚರನಾಗಿದ್ದ ಮೀಸೆಕಾರ್ ಮಾದಯ್ಯ ಬೆಂಗಳೂರಿನ ನಿಮ್ಹಾನ್ಸ್ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದು, ತಮಿಳುನಾಡಿನ ಪಾಲಾರ್ ಬಾಂಬ್ ಸ್ಫೋಟದ ಅಪರಾಧಿಯಾಗಿದ್ದ ಈತ ಜೀವಾವಧಿ ಶಿಕ್ಷೆಗೆ ಗುರಿಯಾಗಿ ಮೈಸೂರು ಜೈಲಿನಲ್ಲಿದ್ದರು.
34 ವರ್ಷಗಳಿಂದ ಮೈಸೂರು ಜೈಲಿನಲ್ಲಿದ್ದ ಮೀಸೆಕಾರ್ ಮಾದಯ್ಯ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದು, ಮೈಸೂರಿನಲ್ಲಿ ಚಿಕಿತ್ಸೆ ಕೊಡಿಸಿದ ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ನಿಮ್ಹಾನ್ಸ್ ಆಸ್ಪತ್ರೆಗೆ ಸ್ಥಳಾಂತರಿಸಲಾಗಿತ್ತು.
ಚಿಕಿತ್ಸೆ ಫಲಕಾರಿಯಾಗದೆ ಮೀಸೆಕಾರ್ ಮಾದಯ್ಯ ಮೃತಪಟ್ಟಿದ್ದು, ಮರಣೋತ್ತರ ಪರೀಕ್ಷೆ ಬಳಿಕ ಮೃತ ದೇಹವನ್ನು ಸಂಬಂಧಿಕರಿಗೆ ಹಸ್ತಾಂತರಿಸಲಾಗಿದೆ ಎಂದು ಕಾರಾಗೃಹದ ಪೊಲೀಸ್ ಮೂಲಗಳು ತಿಳಿಸಿವೆ.