alex Certify ವೀರಪ್ಪನ್ ಸಹಚರ ಮೀಸೆಕಾರ್ ಮಾದಯ್ಯ ನಿಮ್ಹಾನ್ಸ್ ಆಸ್ಪತ್ರೆಯಲ್ಲಿ ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ವೀರಪ್ಪನ್ ಸಹಚರ ಮೀಸೆಕಾರ್ ಮಾದಯ್ಯ ನಿಮ್ಹಾನ್ಸ್ ಆಸ್ಪತ್ರೆಯಲ್ಲಿ ಸಾವು

ಕುಖ್ಯಾತ ದಂತ ಚೋರ ವೀರಪ್ಪನ್ ಸಹಚರನಾಗಿದ್ದ ಮೀಸೆಕಾರ್ ಮಾದಯ್ಯ ಬೆಂಗಳೂರಿನ ನಿಮ್ಹಾನ್ಸ್ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದು, ತಮಿಳುನಾಡಿನ ಪಾಲಾರ್ ಬಾಂಬ್ ಸ್ಫೋಟದ ಅಪರಾಧಿಯಾಗಿದ್ದ ಈತ ಜೀವಾವಧಿ ಶಿಕ್ಷೆಗೆ ಗುರಿಯಾಗಿ ಮೈಸೂರು ಜೈಲಿನಲ್ಲಿದ್ದರು.

34 ವರ್ಷಗಳಿಂದ ಮೈಸೂರು ಜೈಲಿನಲ್ಲಿದ್ದ ಮೀಸೆಕಾರ್ ಮಾದಯ್ಯ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದು, ಮೈಸೂರಿನಲ್ಲಿ ಚಿಕಿತ್ಸೆ ಕೊಡಿಸಿದ ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ನಿಮ್ಹಾನ್ಸ್ ಆಸ್ಪತ್ರೆಗೆ ಸ್ಥಳಾಂತರಿಸಲಾಗಿತ್ತು.

ಚಿಕಿತ್ಸೆ ಫಲಕಾರಿಯಾಗದೆ ಮೀಸೆಕಾರ್ ಮಾದಯ್ಯ ಮೃತಪಟ್ಟಿದ್ದು, ಮರಣೋತ್ತರ ಪರೀಕ್ಷೆ ಬಳಿಕ ಮೃತ ದೇಹವನ್ನು ಸಂಬಂಧಿಕರಿಗೆ ಹಸ್ತಾಂತರಿಸಲಾಗಿದೆ ಎಂದು ಕಾರಾಗೃಹದ ಪೊಲೀಸ್ ಮೂಲಗಳು ತಿಳಿಸಿವೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...