ವೀರಶೈವ ಲಿಂಗಾಯತ ಸಮುದಾಯಕ್ಕೆ ಮಹತ್ವದ ಮಾಹಿತಿಯೊಂದು ಇಲ್ಲಿದೆ. ಕರ್ನಾಟಕ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮ ನಿಯಮಿತ ವತಿಯಿಂದ ಬಸವ ಬೆಳಗು, ವಿದೇಶ ವಿದ್ಯಾ ವಿಕಾಸ, ಜೀವಜಲ, ಸ್ವಸಹಾಯ ಸಂಘಗಳಿಗೆ ಉತ್ತೇಜನ ಮತ್ತು ಕಾಯಕ ಕಿರಣ ಯೋಜನೆಗಳಿಗೆ ಸಾಲ ಹಾಗೂ ಸಹಾಯಧನ ಸೌಲಭ್ಯಕ್ಕೆ ಅರ್ಜಿ ಸಲ್ಲಿಸುವ ಅವಧಿಯನ್ನು ವಿಸ್ತರಿಸಲಾಗಿದೆ.
ಈ ಯೋಜನೆಗಳ ಸೌಲಭ್ಯ ಪಡೆಯಲು ವೀರಶೈವ ಲಿಂಗಾಯತ ಸಮುದಾಯದ ಅರ್ಹ ಫಲಾಪೇಕ್ಷಿಗಳಿಂದ ಅರ್ಜಿಗಳನ್ನು ಅಕ್ಟೋಬರ್ 15ರಿಂದ ಆಹ್ವಾನಿಸಿದ್ದು, ಅರ್ಜಿ ಸಲ್ಲಿಸಲು ನವೆಂಬರ್ 30 ಅಂತಿಮ ದಿನಾಂಕವಾಗಿತ್ತು. ಇದೀಗ ಅರ್ಜಿ ಸಲ್ಲಿಸುವ ಅವಧಿಯನ್ನು ಡಿಸೆಂಬರ್ 15 ರವರೆಗೆ ವಿಸ್ತರಿಸಲಾಗಿದೆ.
ಅರ್ಹ ಫಲಾಪೇಕ್ಷಿಗಳು ಗ್ರಾಮ ಒನ್ / ಬೆಂಗಳೂರು ಒನ್ / ಕರ್ನಾಟಕ ಒನ್ / ನಾಗರೀಕ ಸೇವಾ ಕೇಂದ್ರಗಳಲ್ಲಿ ಸೂಕ್ತ ದಾಖಲೆಗಳೊಂದಿಗೆ ಸೇವಾ ಸಿಂಧು ಪೋರ್ಟಲ್ ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ. ಈ ಐದು ಯೋಜನೆಗಳಿಗೆ ಸಂಬಂಧಿಸಿದಂತೆ ಹೆಚ್ಚಿನ ಮಾಹಿತಿಗಾಗಿ ನಿಗಮದ ಅಧಿಕೃತ ವೆಬ್ ಸೈಟ್ https://kvldcl.karnataka.gov.in ಗೆ ಭೇಟಿ ನೀಡಬಹುದಾಗಿದೆ.