ಇಂಜಿನಿಯರಿಂಗ್ ಸೇರಿದಂತೆ ವಿವಿಧ ವೃತ್ತಿಪರ ಕೋರ್ಸ್ ಗಳಿಗೆ ಪ್ರವೇಶ ಬಯಸಿ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ಬರೆದಿರುವ ವಿದ್ಯಾರ್ಥಿಗಳಿಗೆ ಮಹತ್ವದ ಮಾಹಿತಿಯೊಂದು ಇಲ್ಲಿದೆ. ಸಿಇಟಿ ಆರ್‌ಡಿ ಸಂಖ್ಯೆ ನಮೂದಿಸಲು ಈಗ ಮತ್ತಷ್ಟು ಕಾಲಾವಕಾಶ ನೀಡಲಾಗಿದೆ.
ಅಭ್ಯರ್ಥಿಗಳು ಆನ್ಲೈನ್ ಮೂಲಕ ಸಲ್ಲಿಸಿರುವ ಅರ್ಜಿಯಲ್ಲಿ ಹಲವು ಪ್ರಮಾಣ ಪತ್ರಗಳಿಗೆ (ಜಾತಿ, ಆದಾಯ, ಕಲ್ಯಾಣ ಕರ್ನಾಟಕ 371 ಜೆ) ಸಂಬಂಧಿಸಿದಂತೆ ಸರಿಯಾದ ಆರ್ ಡಿ ಸಂಖ್ಯೆಯನ್ನು ನಮೂದಿಸಲು ಜುಲೈ 16ರ ಸಂಜೆ 6 ಗಂಟೆಯವರೆಗೆ ಅವಕಾಶ ಸಿಗಲಿದೆ.
ಈ ಕುರಿತಂತೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕಿ ರಮ್ಯಾ ಪತ್ರಿಕಾ ಪ್ರಕಟಣೆ ಹೊರಡಿಸಿದ್ದು, ಪ್ರಮಾಣ ಪತ್ರಗಳು ನಿಗದಿತ ನಮೂನೆಗಳಲ್ಲಿ ಇಲ್ಲದಿರುವುದು, ಅಭ್ಯರ್ಥಿಗಳ ಹೆಸರಿನಲ್ಲಿ ಇಲ್ಲದೆ ಇರುವುದು ಸೇರಿದಂತೆ ಹಲವು ಕಾರಣಗಳಿಂದ ಆರ್ ಡಿ ಸಂಖ್ಯೆ ತಾಳೆಯಾಗದೆ ಸಾವಿರಾರು ಅಭ್ಯರ್ಥಿಗಳ ಅರ್ಜಿ ತಿರಸ್ಕೃತಗೊಂಡಿದೆ. ಇಂಥವರ ಹೆಸರುಗಳನ್ನು ಪ್ರಾಧಿಕಾರದ ವೆಬ್ ಸೈಟ್ ನಲ್ಲಿ ಪ್ರಕಟಿಸಲಾಗಿದ್ದು, ವಿದ್ಯಾರ್ಥಿಗಳ ಕೋರಿಕೆಯ ಮೇರೆಗೆ ಇದನ್ನು ಸರಿಪಡಿಸಲು ಮತ್ತೊಂದು ಅವಕಾಶ ನೀಡಲಾಗಿದೆ ಎಂದು ಹೇಳಿದ್ದಾರೆ.