ಉತ್ತರ ಪ್ರದೇಶದ ಘಾಜಿಯಾಬಾದ್ ಜಿಲ್ಲೆಯಲ್ಲಿ ಎದೆ ಝಲ್ ಎನ್ನಿಸುವ ಹಿಟ್ & ರನ್ ಪ್ರಕರಣ ನಡೆದಿದ್ದು, ಈ ಘಟನೆಯ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದೆ.
ವೃದ್ಧರೊಬ್ಬರು ತಮ್ಮ ಮನೆಯ ಹೊರಗೆ ಖುರ್ಚಿ ಮೇಲೆ ಕುಳಿತುಕೊಳ್ಳಲು ಮುಂದಾಗುತ್ತಿದ್ದಂತೆಯೇ ವೇಗವಾಗಿ ಬಂದ ಕಾರು ಏಕಾಏಕಿ ವೃದ್ಧನ ಮೇಲೆ ಹರಿದಿದೆ.
ಉದ್ದೇಶಪೂರ್ವಕವಾಗಿಯೇ ಕಾರನ್ನು ನನ್ನ ಮೇಲೆ ಹರಿಸಿದ್ದಾರೆ ಎಂದು ವೃದ್ಧ ಪೊಲೀಸರಿಗೆ ಹೇಳಿಕೆ ನೀಡಿದ್ದಾರೆ. ಆರು ತಿಂಗಳ ಹಿಂದೆ ಆರಂಭವಾದ ವಿವಾದದಿಂದಾಗಿ ನೆರೆಹೊರೆಯವರು ಕೂಡ ಈ ಕೃತ್ಯದಲ್ಲಿ ಶಾಮೀಲಾಗಿರಬಹುದು ಎಂದು ಆರೋಪಿಸಿದ್ದಾರೆ.
ಈ ಘಟನೆ ಸಂಬಂಧ ಪ್ರಕರಣ ದಾಖಲಿಸಿಕೊಂಡಿದ್ದೇವೆ. ಈ ಪ್ರಕರಣದಲ್ಲಿ ಭಾಗಿಯಾದವರ ಬಗ್ಗೆ ಈಗಾಗಲೇ ತನಿಖೆ ನಡೆಸುತ್ತಿದ್ದೇವೆ. ಸಿಸಿ ಟಿವಿ ವಿಡಿಯೋವನ್ನು ಪರಿಶೀಲಿಸಿದ್ದೇವೆ. ಶೀಘ್ರದಲ್ಲೇ ತಪ್ಪಿತಸ್ಥರನ್ನು ಬಂಧಿಸುತ್ತೇವೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.