ಸಾರಿಗೆ ಸಂಸ್ಥೆಗಳ ನೌಕರರಿಗೆ ಇತ್ತೀಚೆಗಷ್ಟೇ ನೆಮ್ಮದಿಯ ಸುದ್ದಿಯೊಂದನ್ನು ನೀಡಲಾಗಿತ್ತು. ಪ್ರತಿ ಬಾರಿಯೂ ವೇತನ ವಿಳಂಬವಾಗುತ್ತಿದ್ದ ಹಿನ್ನೆಲೆಯಲ್ಲಿ ಇನ್ನು ಮುಂದೆ ವೇತನವನ್ನು ತಿಂಗಳ ಮೊದಲ ದಿನದಂದೇ ಪಾವತಿಸಲು ಕ್ರಮ ಕೈಗೊಳ್ಳಲಾಗಿತ್ತು.
ಇದೀಗ ಸಾರಿಗೆ ಸಂಸ್ಥೆಗಳ ನೌಕರರ ವೇತನ ಹೆಚ್ಚಳದ ಕುರಿತು ಮುಖ್ಯವಾದ ಮಾಹಿತಿ ಇಲ್ಲಿದೆ. ಈ ನೌಕರರ ವೇತನ ಪರಿಷ್ಕರಣೆಗಾಗಿ ಈಗಾಗಲೇ ಸಮಿತಿ ವರದಿ ಸಲ್ಲಿಸಿದ್ದು, ಆರ್ಥಿಕ ಇಲಾಖೆಯೊಂದಿಗೆ ಚರ್ಚೆ ನಡೆಸಿದ ಬಳಿಕ ಶೀಘ್ರದಲ್ಲೇ ವೇತನ ಪರಿಷ್ಕರಣೆಗೆ ನಿರ್ಧಾರ ಕೈಗೊಳ್ಳಲಾಗುತ್ತದೆ.
ವಿಧಾನ ಪರಿಷತ್ ನಲ್ಲಿ ಸಾರಿಗೆ ಸಚಿವ ಬಿ. ಶ್ರೀರಾಮುಲು ಸದಸ್ಯ ಡಿ.ಎಸ್. ಅರುಣ್ ಅವರ ಪ್ರಶ್ನೆಗೆ ಈ ಉತ್ತರ ನೀಡಿದ್ದು, ಸಾರಿಗೆ ಸಂಸ್ಥೆಗಳ ನೌಕರರ ವೇತನ ಏರಿಕೆಗೆ ಸರ್ಕಾರ ಬದ್ಧವಾಗಿದೆ. 2016ರ ನಂತರ ಇವರುಗಳ ವೇತನ ಹೆಚ್ಚಳ ಮಾಡಲಾಗಿಲ್ಲ ಎಂದು ತಿಳಿಸಿದ್ದಾರೆ.