ಬೆಳಗಾವಿ ನಗರದ ಹಿಂಡಲಗಾ – ಸುಳಗಾ ರಸ್ತೆಯಲ್ಲಿರುವ ಲಾಡ್ಜ್ ಒಂದರ ಮೇಲೆ ದಾಳಿ ನಡೆಸಿರುವ ಪೊಲೀಸರು ನಾಲ್ವರು ಆರೋಪಿಗಳನ್ನು ಬಂಧಿಸಿ ಯುವತಿಯರನ್ನು ರಕ್ಷಣೆ ಮಾಡಿದ್ದಾರೆ.
ಬುಧವಾರ ಮಹಿಳಾ ಪೊಲೀಸ್ ಠಾಣೆಯ ಪಿಎಸ್ಐ ಶ್ರೀದೇವಿ ಪಾಟೀಲ ಅವರ ನೇತೃತ್ವದಲ್ಲಿ ಅಂಬಿಕಾ ಲಾಡ್ಜ್ ಮೇಲೆ ದಾಳಿ ನಡೆಸಿದ ಪೊಲೀಸರು, ವೇಶ್ಯಾವಾಟಿಕೆ ನಡೆಸುತ್ತಿದ್ದ ಸೋಮನಾಥ ಗವಳಿ, ರಾಹುಲ್ ಪಾಟೀಲ, ರಮೇಶ ತಾರಿಹಾಳ ಹಾಗೂ ಮಯೂರ ಪಟೇಲ ಎಂಬವರನ್ನು ಬಂಧಿಸಿದ್ದಾರೆ.
ಇವರುಗಳು ಯುವತಿಯರು ಹಾಗೂ ಮಹಿಳೆಯರಿಗೆ ಕೆಲಸದ ಆಮಿಷವೊಡ್ಡಿ ಕರೆ ತಂದು ವೇಶ್ಯಾವಾಟಿಕೆ ದಂಧೆಯಲ್ಲಿ ತೊಡಗಿಸುತ್ತಿದ್ದರು ಎನ್ನಲಾಗಿದೆ. ಇದೀಗ ಆರೋಪಿಗಳನ್ನು ಬಂಧಿಸಿ ಯುವತಿಯರು ಮತ್ತು ಮಹಿಳೆಯರನ್ನು ರಕ್ಷಿಸಲಾಗಿದೆ.