ಸರ್ಕಾರಿ ಆಸ್ಪತ್ರೆಯಲ್ಲಿನ ವಿದ್ಯಾರ್ಥಿಗಳು, ವೈದ್ಯರು ಹಾಗೂ ಸಿಬ್ಬಂದಿ ಸೇರಿದಂತೆ ಸುಮಾರು 80 ಜನರಲ್ಲಿ ಸೋಂಕು ಕಾಣಿಸಿಕೊಂಡಿರುವ ಕುರಿತು ವರದಿಯಾಗಿದೆ.
ಪಂಜಾಬ್ ನ ಪಟಿಯಾಲದ ಸರ್ಕಾರಿ ಆಸ್ಪತ್ರೆ ಮತ್ತು ಮೆಡಿಕಲ್ ಕಾಲೇಜಿನಲ್ಲಿ ಕೊರೊನಾ ಸ್ಪೋಟವಾಗಿದ್ದು, ಹೀಗಾಗಿ ಈ ರಾಜ್ಯದಲ್ಲಿ ಕೂಡ ಕೊರೊನಾ ಆತಂಕ ಶುರುವಾಗಿದೆ. ಪಟಿಯಾಲದಲ್ಲಿನ ಈ ಆಸ್ಪತ್ರೆಯ ಸಿಬ್ಬಂದಿ, ವೈದ್ಯರು ಹಾಗೂ ವಿದ್ಯಾರ್ಥಿಗಳನ್ನು ಕೊರೊನಾ ಟೆಸ್ಟ್ ಗೆ ಒಳಪಡಿಸಲಾಗಿದೆ.
ಕೊರೊನಾ ಸೋಂಕು ಕಾಣಿಸಿಕೊಂಡಿದ್ದ ಹಿನ್ನೆಲೆಯಲ್ಲಿ ಕಾಲೇಜಿನಲ್ಲಿನ ಸುಮಾರು 1 ಸಾವಿರ ವಿದ್ಯಾರ್ಥಿಗಳನ್ನು ಹಾಸ್ಟೆಲ್ ನಿಂದ ಬೇರೆಡೆ ಸ್ಥಳಾಂತರಿಸಲಾಗಿದೆ.
ಇತ್ತೀಚೆಗಷ್ಟೇ ಇದೇ ನಗರದಲ್ಲಿನ ಇಂಜಿನಿಯರಿಂಗ್ ಕಾಲೇಜಿನ 93 ವಿದ್ಯಾರ್ಥಿಗಳಲ್ಲಿ ಕೂಡ ಸೋಂಕು ಕಾಣಿಸಿಕೊಂಡಿತ್ತು. ಈಗ ಮತ್ತೆ ಸರ್ಕಾರಿ ಆಸ್ಪತ್ರೆಗೆ ನುಗ್ಗಿರುವ ಸೋಂಕು ತೀವ್ರ ಆತಂಕ ಸೃಷ್ಟಿಸುತ್ತಿದೆ. ಈ ನಿಟ್ಟಿನಲ್ಲಿ ಪಂಜಾಬ್ ನಲ್ಲಿ ಕೂಡ ಹಲವು ಕಟ್ಟು ನಿಟ್ಟಿನ ನಿಯಮಗಳನ್ನು ಜಾರಿಗೊಳಿಸಲಾಗುತ್ತಿದೆ.
ಆಸ್ಪತ್ರೆಯಲ್ಲಿ ಕೊರೊನಾ ಸ್ಫೋಟಗೊಂಡ ಬಳಿಕ ಪಟಿಯಾಲದಲ್ಲಿ ಒಟ್ಟು 143 ಜನರಲ್ಲಿ ಒಂದೇ ದಿನ ಸೋಂಕು ಕಾಣಿಸಿಕೊಂಡಿದೆ. ಅಲ್ಲದೇ, ರಾಜ್ಯದಲ್ಲಿ ಒಟ್ಟು 419 ಜನರಲ್ಲಿ ಹೊಸದಾಗಿ ಸೋಂಕು ಕಾಣಿಸಿಕೊಂಡಿದೆ. ಪಟಿಯಾಲ ಸದ್ಯ ಪಂಜಾಬ್ ನಲ್ಲಿಯೇ ಅತೀ ಹೆಚ್ಚು ಕೊರೊನಾ ಪ್ರಕರಣಗಳು ಕಂಡು ಬಂದಿರುವ ನಗರವಾಗಿದೆ.