alex Certify ವೈದ್ಯಕೀಯ ಪರೀಕ್ಷೆಯಲ್ಲಿ ಅನುತ್ತೀರ್ಣ; ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ವೈದ್ಯಕೀಯ ಪರೀಕ್ಷೆಯಲ್ಲಿ ಅನುತ್ತೀರ್ಣ; ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ

ವೈದ್ಯಕೀಯ ಪರೀಕ್ಷೆಯಲ್ಲಿ ಅನುತ್ತೀರ್ಣವಾಗಿದ್ದಕ್ಕೆ ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ.

ದೆಹಲಿಯಲ್ಲಿನ ಮೌಲಾನಾ ಆಜಾದ್ ಮೆಡಿಕಲ್ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದ ದಿವ್ಯಾ ಯಾದವ್(19) ಎಂಬ ವಿದ್ಯಾರ್ಥಿನಿಯೇ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ತಿಳಿದು ಬಂದಿದ್ದು, ಇತ್ತೀಚೆಗೆ ನಡೆದಿದ್ದ ಮೆಡಿಕಲ್ ಪರೀಕ್ಷೆಯ ಎರಡು ವಿಷಯದಲ್ಲಿ ಅನುತ್ತೀರ್ಣರಾಗಿದ್ದರು ಎನ್ನಲಾಗಿದೆ. ಇದರಿಂದಾಗಿ ಮನನೊಂದು ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ತಿಳಿದು ಬಂದಿದೆ.

ಹಾಸ್ಟೆಲ್ ನಲ್ಲಿಯೇ ದಿವ್ಯಾ ನೇಣಿಗೆ ಶರಣಾಗಿದ್ದು, ಎಲ್ಲರೂ ಹೊರಗೆ ಹೋಗಿದ್ದ ಸಂದರ್ಭದಲ್ಲಿ ರೂಂನ ಬಾಗಿಲು ಹಾಕಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾಳೆ. ಕೆಲವು ಸಮಯವಾದರೂ ರೂಂನಿಂದ ಹೊರಗೆ ಬಾರದಿರುವುದನ್ನು ಗಮನಿಸಿದ ಸಿಬ್ಬಂದಿ ಬಾಗಿಲು ಒಡೆದು ತೆರೆದು ನೋಡಿದಾಗ ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ.

Good News: ಉಡುಪುಗಳ ಮೇಲೆ ಸದ್ಯಕ್ಕಿಲ್ಲ GST

ದಿವ್ಯಾಳ ಆತ್ಮಹತ್ಯೆಗೆ ಸಂಬಂಧಿಸಿದಂತೆ ಅವಳ ಸ್ನೇಹಿತೆಯರು ತೀವ್ರ ದುಃಖ ವ್ಯಕ್ತಪಡಿಸಿದ್ದು, ಪರೀಕ್ಷೆಯಲ್ಲಿ ಅನುತ್ತೀರ್ಣವಾಗಿದ್ದಕ್ಕೆ ಅವಳು ತುಂಬಾ ನೊಂದಿದ್ದಳು. ನಮ್ಮ ತಂದೆ – ತಾಯಿ ತುಂಬಾ ಕಷ್ಟ ಪಟ್ಟು ಹಾಗೂ ಹೆಚ್ಚು ಖರ್ಚು ಮಾಡಿ ನನ್ನನ್ನು ಓದಿಸುತ್ತಿದ್ದಾರೆ. ಆದರೆ, ನನಗೆ ಪಾಸ್ ಆಗಲು ಆಗಲಿಲ್ಲ. ಅವರಿಗೆ ನಾನು ಅವರಿಗೆ ಮುಖ ತೋರಿಸುವ ಅರ್ಹತೆ ಕಳೆದುಕೊಂಡಿದ್ದೇನೆ ಎಂದು ಆಗಾಗ ವಿಷಾದಪಡುತ್ತಿದ್ದಳು ಎಂದು ಹೇಳಿದ್ದಾರೆ.

ಈ ಕುರಿತು ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು, ದಿವ್ಯಾಳ ಮೊಬೈಲ್ ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...