ಚೆನೈ: ಆಕೆ ವೈದ್ಯಳಾಗಿ ಜನರ ಸೇವೆ ಮಾಡಬೇಕು ಎಂಬ ಕನಸು ಹೊತ್ತುಕೊಂಡಿದ್ದರು. ಆದರೆ ಆಕೆ ವೈದ್ಯಳಾಗುವ ಕನಸು ಕನಸಾಗೇ ಉಳಿಯಿತು. ಒಂದು ಜೀವ ಉಳಿಸಬೇಕಾದ ಯುವತಿ ಇದೀಗ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.
ಹೌದು, ನೀಟ್ ಪರೀಕ್ಷೆಯಲ್ಲಿ ಉತ್ತೀರ್ಣಳಾಗದ ಹಿನ್ನಲೆಯಲ್ಲಿ ಯುವತಿಯೊಬ್ಬಳು ಆತ್ಮಹತ್ಯೆಗೆ ಶರಣಾದ ಘಟನೆ ಚೆನೈ ನಲ್ಲಿ ನಡೆದಿದೆ. ಶ್ವೇತಾ(19) ಆತ್ಮಹತ್ಯೆ ಮಾಡಿಕೊಂಡ ಯುವತಿ.
ಅಂಬತ್ತೂರು ಸಮೀಪದ ತಿರುಮುಲೈವಲೈನ ಮನೆಯಲ್ಲಿ ಸೀಲಿಂಗ್ ಫ್ಯಾನ್ ಗೆ ನೇಣು ಬಿಗಿದುಕೊಂಡಿದ್ದಾಳೆ. ಘಟನೆ ತಿಳಿದ ಪೊಲೀಸರು ಸ್ಥಳಕ್ಕೆ ಆಗಮಿಸಿದ ಪರಿಶೀಲನೆ ನಡೆಸಿದ್ದಾರೆ. ಮೇಲ್ನೋಟಕ್ಕೆ ಇದು ಆತ್ಮಹತ್ಯೆ ಎಂದು ತಿಳಿದು ಬಂದಿದ್ದು, ಹೆಚ್ಚಿನ ವಿವರಗಳಿಗೆ ತನಿಖೆ ನಡೆಸುತ್ತಿದ್ದಾರೆ.