alex Certify ವ್ಯಕ್ತಿಯೊಬ್ಬನಿಂದ ‘ಛೋಟಾ ಪಾಕಿಸ್ತಾನ್’ ಘೋಷಣೆ;‌ ವಿಡಿಯೋ ವೈರಲ್​ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ವ್ಯಕ್ತಿಯೊಬ್ಬನಿಂದ ‘ಛೋಟಾ ಪಾಕಿಸ್ತಾನ್’ ಘೋಷಣೆ;‌ ವಿಡಿಯೋ ವೈರಲ್​

ಮೈಸೂರಿನ ನಂಜನಗೂಡು ತಾಲೂಕಿನ ಕೌಲಂದೆ ಎಂಬ ಗ್ರಾಮದಲ್ಲಿ ವ್ಯಕ್ತಿಯೊಬ್ಬ ಛೋಟಾ ಪಾಕಿಸ್ತಾನ ಎಂಬ ಘೋಷಣೆಯನ್ನು ಕೂಗಿದ್ದು ಈ ವಿಡಿಯೋ ಸೋಶಿಯಲ್​ ಮೀಡಿಯಾಗಳಲ್ಲಿ ವೈರಲ್​ ಆಗಿದ್ದು ವ್ಯಾಪಕ ಆಕ್ರೋಶಕ್ಕೆ ಗುರಿಯಾಗಿದೆ.

ರಂಜಾನ್​ ಹಬ್ಬವನ್ನು ಮುಗಿಸಿದ್ದ ಮುಸ್ಲಿಂ ಬಾಂಧವರೆಲ್ಲ ಗ್ರಾಮದಲ್ಲಿ ಒಂದೆಡೆ ಸೇರಿದ್ದರು. ಈ ವೇಳೆ ವ್ಯಕ್ತಿಯೊಬ್ಬ ವಿಡಿಯೋ ಮಾಡಲು ಆರಂಭಿಸಿದ್ದಾನೆ. ಮುಸ್ಲಿಂ ಬಾಂಧವರು ಕೆಲವು ಘೋಷಣೆಗಳನ್ನು ಕೂಗಿದ್ದಾರೆ. ಈ ಘೋಷಣೆಗಳನ್ನು ಕೂಗಿದ ಬಳಿಕ ವಿಡಿಯೋ ಮಾಡುತ್ತಿದ್ದ ವ್ಯಕ್ತಿ ಹಾಗೂ ಆತನ ಜೊತೆ ಇರುವ ಇನ್ನೊಬ್ಬ ವ್ಯಕ್ತಿ ಸೇರಿ ಕೌಲಂದೆ ಗ್ರಾಮವೆಂದರೆ ಅದು ಛೋಟಾ ಪಾಕಿಸ್ತಾನ ಎಂದು ಘೋಷಣೆ ಕೂಗಿದ್ದಾರೆ.

ಈ ವಿಡಿಯೋ ಸೋಶಿಯಲ್​ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್​ ಆಗಿದೆ. ಈ ಘಟನೆಯ ಸಂಬಂಧ ಸಿಎಂ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯೆ ನೀಡಿದ್ದು, ಈ ಬಗ್ಗೆ ನಾನು ಜಿಲ್ಲಾ ಪೊಲೀಸ್​ ವರಿಷ್ಠಾಧಿಕಾರಿಗಳೊಂದಿಗೆ ಮಾತನಾಡುತ್ತೇನೆ. ಶೀಘ್ರದಲ್ಲಿಯೇ ಆರೋಪಿಯ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಭರವಸೆ ನೀಡಿದ್ರು.

Related News

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...